ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ ಕಾಮೆಡ್-ಕೆ ಹಾಗೂ ಸಿಎಲ್ಎಟಿ ಪರೀಕ್ಷೆಗಳು ನಡೆದಿದ್ದು ವಿದ್ಯಾರ್ಥಿಗಳಿಗೆ ಕಿರಿಕಿರಿಯಾಗಿದೆ.
ಪರೀಕ್ಷೆ ಎದುರಿಸಿದ ಬಹುತೇಕ ವಿದ್ಯಾರ್ಥಿಗಳು ಕಾಮೆಡ್-ಕೆ ಹಾಗೂ ಸಿಎಲ್ಎಟಿ ಎರಡೂ ಪರೀಕ್ಷೆಗಳನ್ನು ಬರೆಯಲು ಉತ್ಸುಕರಾಗಿದ್ದರು. ಆದರೆ ಎರಡೂ ಒಂದೇ ದಿನ ನಡೆದಿದ್ದರಿಂದ ವಿದ್ಯಾರ್ಥಿಗಳು ಯಾವುದಾದರು ಒಂದು ಪರೀಕ್ಷೆಯನ್ನು ಬರೆಯಲು ಮಾತ್ರ ಸಾಧ್ಯವಾಗಿದೆ.
ಸಿಎಲ್ಎಟಿ ಬರೆದ ವಿದ್ಯಾರ್ಥಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ್ದು, ಕಾಮೆಡ್-ಕೆ ಪರೀಕ್ಷೆಯನ್ನೂ ಬರೆಯುವ ಇಚ್ಛೆ ಇತ್ತು. ಆದರೆ ಎರಡೂ ಪರೀಕ್ಷೆಗಳು ಒಂದೇ ದಿನ ನಡೆದಿದ್ದರಿಂದ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ.
ಪರೀಕ್ಷೆಯ ವೇಳಾಪಟ್ಟಿ ಘೋಷಣೆಯಾಗುತ್ತಿದ್ದಂತೆಯೇ, ಕಾಮೆಡ್-ಕೆ ಹಾಗೂ ಸಿಎಲ್ಎಟಿ ಪರೀಕ್ಷೆಗಳನ್ನು ಒಂದೇ ದಿನ ನಡೆಸದಂತೆ ಹಲವು ವಿದ್ಯಾರ್ಥಿಗಳು ಪರೀಕ್ಷಾ ಪ್ರಾಧಿಕಾರಿದ ಅಧಿಕಾರಿಗಳಿಗೆ ಇ-ಮೇಲ್ ಮಾಡಿ ಮನವಿ ಮಾಡಿಕೊಂಡಿದ್ದರು. ಆದರೆ ವಿದ್ಯಾರ್ಥಿಗಳ ಮನವಿಗೆ ಅಧಿಕಾರಿಗಳು ಸ್ಪಂದಿಸದೇ ಇದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಯಾವುದಾದರು ಒಂದು ಪರೀಕ್ಷೆ ಬರೆಯುವುದಕ್ಕೆ ಸಾಧ್ಯವಾಗಿದೆ.
ಕರ್ನಾಟಕದಲ್ಲಿ ಕಾಮೆಡ್-ಕೆ ಪರೀಕ್ಷೆ 115 ಕೇಂದ್ರಗಳಲ್ಲಿ ನಡೆದಿದ್ದು ಒಟ್ಟು 70,655 ಅಭ್ಯರ್ಥಿಗಳ ಪೈಕಿ 58,932 ವಿದ್ಯಾರ್ಥಿಗಳು ಕಾಮೆಡ್-ಕೆ ಪರೀಕ್ಷೆಯನ್ನು ಬರೆದಿದ್ದಾರೆ. ಪರೀಕ್ಷೆಯ ಫಲಿತಾಂಶ ಮೇ.29 ರಂದು ಪ್ರಕಟವಾಗಲಿದೆ.