ರಾಜ್ಯ

ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್, ಇಬ್ಬರು ಸಾವು, 20 ಮಂದಿಗೆ ಗಾಯ

Lingaraj Badiger
ಬೆಳ್ತಂಗಡಿ: ಚಾರ್ಮಾಡಿ ಘಾಟ್‌ ನಲ್ಲಿ ಖಾಸಿಗ ಖಾಸಗಿ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಪ್ರವಾಸಕ್ಕೆ ಆಗಮಿಸಿದ್ದ ಕೇರಳ ಮೂಲದ ಖಾಸಗಿ ಬಸ್ ಇಂದು ಮಧ್ಯಾಹ್ನ ಚಾರ್ಮಾಡಿ ಘಾಟ್‌ನ 3 ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತಪ್ಪಿ ಕಂದಕಕ್ಕೆ ಉರುಳಿದೆ.
ಮೂಡಿಗೆರೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಈ ಬಸ್ ನಲ್ಲಿ ಸುಮಾರು 35 ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
SCROLL FOR NEXT