ರಾಜ್ಯ

ಜಾರಿಯಾಗದ ಮೂಢನಂಬಿಕೆ ಪ್ರತಿಬಂಧಕ ವಿಧೇಯಕ: ಸಿಎಂ ವಿರುದ್ಧ ಮಠಾಧೀಶರ ಅಸಮಾಧಾನ

Shilpa D
ಬೆಂಗಳೂರು: ಮೂಢ ನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತರುವಂತೆ ಒತ್ತಾಯಿಸಿ ವಿವಿಧ ಮಠಗಳ ಮಠಾಧೀಶರು ಮಂಗಳುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಸುಮಾರು 50 ಮಠಾಧೀಶರನ್ನೊಳಗೊಂಡ ನಿಯೋಗ ನಿಡುಮಾಮಿಡಿ ಸ್ವಾಮೀಜಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಜೊತೆ ಸಭೆ ನಡೆಸಿತು.
ಸಭೆ ಬಳಿಕ ಮಾತನಾಡಿದ ಸಿಎಂ. ಸ್ವಾಮೀಜಿಗಳ ನಿಯೋಗ ಕೂಡಲೇ ಮೂಢನಂಬಿಕೆ ಪ್ರತಿಬಂಧಕ ವಿಧೇಯಕನ್ನು ಜಾರಿ ಮಾಡುವಂತೆ ಮನವಿ ಮಾಡಿಕೊಂಡಿದೆ. ಈ ಕಾಯ್ದೆ ಸಂಬಂಧ ಈಗಾಗಲೇ  ಸಂಪುಟ ಉಪಸಮಿತಿ ರಚನೆ ಮಾಡಿದ್ದೇವೆ. ಈ ಬಗ್ಗೆ ವರದಿ ಬಂದ ಬಳಿಕ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
SCROLL FOR NEXT