ಕೊಯ್ನಾ ಡ್ಯಾಂ 
ರಾಜ್ಯ

ಮಹಾರಾಷ್ಟ್ರದ ಕೊಯ್ನಾ ಡ್ಯಾಂನಿಂದ ಕರ್ನಾಟಕಕ್ಕೆ 3 ಟಿಎಂಸಿ ನೀರು

ರಾಜ್ಯದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಮಹಾರಾಷ್ಟ್ರ ಕೊಯ್ನಾ ಡ್ಯಾಂನಿಂದ 3 ಟಿಎಂಸಿ...

ಬೆಂಗಳೂರು: ರಾಜ್ಯದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಮಹಾರಾಷ್ಟ್ರ ಕೊಯ್ನಾ ಡ್ಯಾಂನಿಂದ 3 ಟಿಎಂಸಿ ನೀರು ಬಿಡುಗಡೆ ಮಾಡಲು ತೀರ್ಮಾನಿಸಿದೆ.
ಬರ ಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದೊಂದಿಗೆ ಕೊಯ್ನಾ ಡ್ಯಾಂನಿಂದ ನೀರು ಬಿಡುವಂತೆ ಕರ್ನಾಟಕ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಕರ್ನಾಟಕದ ಮನವಿಗೆ ಸ್ಪಂಧಿಸಿರುವ ಮಹಾರಾಷ್ಟ್ರ 3 ಟಿಎಂಸಿ ನೀರು ಬಿಡಲು ತೀರ್ಮಾನಿಸಿದೆ ಎಂದು ಕರ್ನಾಟಕ ಜಲ ಸಂಪನ್ಮೂಲ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. 
ಮೂರು ಜಿಲ್ಲೆಗಳ ಜನರು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ರಾಜ್ಯಕ್ಕೆ 4 ಟಎಂಸಿ ನೀರು ಬಿಡುವಂತೆ ಕರ್ನಾಟಕ ಜಲ ಸಂಪನ್ಮೂಲ ಪ್ರಧಾನ ಕಾರ್ಯದರ್ಶಿ ಅವರು ಮಹಾರಾಷ್ಟ್ರ ಪ್ರಧಾನ ಕಾರ್ಯದರ್ಶಿ ಐಸಿ ಚಹಾಲ್ ಅವರೊಂದಿಗೆ ಚರ್ಚಿಸಿ ಮನವಿ ಮಾಡಿದ್ದರು. ಇದಕ್ಕೆ ಮಹಾರಾಷ್ಟ್ರ ಸರ್ಕಾರ ಸ್ಪಂಧಿಸಿದೆ. 
3 ಟಿಎಂಸಿ ನೀರು ಬಿಡಲು ಮಹಾರಾಷ್ಟ್ರ ಸರ್ಕಾರ ಉದ್ದೇಶಿಸಿರುವುದರಿಂದ ರಾಜ್ಯ ಸರ್ಕಾರ ಮಹಾರಾಷ್ಟ್ರಕ್ಕೆ ಮುಂಚಿತವಾಗಿ 36 ಕೋಟಿ ರುಪಾಯಿಯನ್ನು ಬಿಡುಗಡೆ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!