ಆತ್ಮಹತ್ಯೆ 
ರಾಜ್ಯ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ; ಪೇದೆ ಸುಭಾಷ್ ಸ್ಥಿತಿ ಗಂಭೀರ, ಪತ್ನಿ, ಮಕ್ಕಳು ಸಾವು

ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ಸಿಎಆರ್ ಪೇದೆ ಸುಭಾಷ್ ಕುಟುಂಬ ಸಮೇತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಪತ್ನಿ, ಮಕ್ಕಳಿಬ್ಬರು ಮೃತಪಟ್ಟಿದ್ದು ಸುಭಾಷ್...

ಬೆಂಗಳೂರು: ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ಸಿಎಆರ್ ಪೇದೆ ಸುಭಾಷ್ ಕುಟುಂಬ ಸಮೇತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಪತ್ನಿ, ಮಕ್ಕಳಿಬ್ಬರು ಮೃತಪಟ್ಟಿದ್ದು ಸುಭಾಷ್ ಸ್ಥಿತಿ ಗಂಭೀರವಾಗಿದೆ. 
ಇಂದು ಬೆಳಗ್ಗೆ ಸುಭಾಷ್ ಅವರ ಅಣ್ಣ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷ ಸೇವಿಸಿ ಅಸ್ವಸ್ಥರಾಗಿದ್ದ ನಾಲ್ವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸುಭಾಷ್ ಪತ್ನಿ ವೀಣಾ, ಮೂರು ವರ್ಷದ ಮಾನ್ಯ ಹಾಗೂ ಒಂದೂವರೆ ವರ್ಷದ ಪೃಥ್ವಿ ಮೃತಪಟ್ಟಿದ್ದಾರೆ. 
ಇನ್ನೂ ಪೇದೆ ಸುಭಾಷ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 
ಬಳ್ಳಾರಿ ಮೂಲದ ಸುಭಾಷ್ ಅವರ ಕುಟುಂಬ ಸಂಪಿಗೆಹಳ್ಳಿಯ ಪೊಲೀಸ್ ಕ್ವಾರ್ಟಸ್ ನಲ್ಲಿ ವಾಸವಿತ್ತು. ನಾಲ್ಕು ವರ್ಷಗಳ ಹಿಂದೆ ಸುಭಾಷ್ ವೀಣಾ ಎಂಬುವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!