ರಾಜ್ಯ

ಕೊಚ್ಚಿಹೋದ ಶಾಂತಕುಮಾರ್ ಪತ್ತೆಯಾಗದ ಹಿನ್ನೆಲೆಯಲ್ಲಿ ಶೋಧ ಕಾರ್ಯ ಸ್ಥಗಿತ

Lingaraj Badiger
ಬೆಂಗಳೂರು: ಕಳೆದ ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಾಜಕಾಲುವೆಯಲ್ಲಿ ಕೊಚ್ಚಿಹೋದ ಕಾರ್ಮಿಕ ಶಾಂತಕುಮಾರ್ ಐದು ದಿನ ಕಳೆದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ ಎಂದು ಬಿಬಿಎಂಪಿ ಮೇಯರ್ ಜಿ.ಪದ್ಮಾವತಿ ಅವರು ಬುಧವಾರ ಹೇಳಿದ್ದಾರೆ.
ಕುರುಬರಹಳ್ಳಿ ಬಳಿಯ ಜೆ.ಸಿ.ನಗರ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಶಾಂತಕುಮಾರ್‌ ಅವರಿಗಾಗಿ ಕಳೆದ ಐದು ದಿನಗಳಿಂದ ನಿರಂತರವಾಗಿ ಹುಡುಕಾಟ ನಡೆಸಲಾಗುತ್ತಿದೆ. ಆದರೆ, ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೇಯರ್ ತಿಳಿಸಿದ್ದಾರೆ. ಅಲ್ಲದೆ ಶಾಂತಕುಮಾರ್ ಕುಟುಂಬಕ್ಕೆ 10 ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ.
ವಿಪತ್ತು ಕ್ರಿಯಾ ತಂಡ, ಅಗ್ನಿಶಾಮಕ ದಳ, ಪೊಲೀಸರು ಮತ್ತು ನಗರ ಪಾಲಿಕೆ ರಕ್ಷಣಾ ತಂಡ ಶಾಂತಕುಮಾರ್ ಹುಡುಕಾಟದಲ್ಲಿ ತೊಡಗಿತ್ತು. 
ರಾಜಾಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಶಾಂತಕುಮಾರ್  ಬಿಬಿಎಂಪಿ ಗುತ್ತಿಗೆದಾರ ಬಸವರಾಜ್ ಅವರ ಸೋದರಳಿಯ. ಕಾರ್ಮಿಕರಿಗೆ ಕೂಲಿ ನೀಡಿ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ರಾಜಕಾಲುವೆಯ ಒಳಹರಿವು ಹೆಚ್ಚಾಗಿದ್ದರಿಂದ ಸುಳಿಯಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.
SCROLL FOR NEXT