ಅಪಘಾತಕ್ಕೊಳಗಾದ ಕಾರು 
ರಾಜ್ಯ

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ಮಧುಮಗಳು ಸೇರಿದಂತೆ ಐವರ ಸಾವು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಧುಮಗಳು ಸೇರಿ ಒಟ್ಟು 5 ಮಂದಿ ಸಾವನ್ನಪ್ಪಿ ಐವರು ಗಾಯಗೊಂಡಿರುವ ಘಟನೆ...

ಕಲಬುರಗಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಧುಮಗಳು ಸೇರಿ ಒಟ್ಟು 5 ಮಂದಿ ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಧುಮಗಳಾದ ಜ್ಯೋತಿ ವಾಲೀಕಾರ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾಳೆ.
ಷಣ್ಮುಖ(35), ಓಂಕಾರ(8)  ಚಾಲಕ ಅಮೋಘ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೋರ್ವ ಬಾಲಕಿ 5 ವರ್ಷದ ಭೂಮಿಕಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಳು. 
ಸೋಮವಾರ ಮದುವೆ ದಿಬ್ಬಣ ಮುಗಿಸಿಕೊಂಡು ಬರುತ್ತಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಮೂರು ಜನ ಸ್ಥಳದಲ್ಲಿಯೇ ಸಾವಿಗೀಡಾಗಿದ್ದರು. ಈ ವೇಳೆ ಗಾಯಗೊಂಡಿದ್ದ ಮಧುಮಗಳು ಜ್ಯೋತಿ ವಾಲಿಕಾರ(21) ಮಂಗಳವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಸಾವಿಗೀಡಾದವರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೋರಟಗಿ ಗ್ರಾಮದವರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಮೊರಟಗಿ ಗ್ರಾಮದಲ್ಲಿ ನೆರವೇರಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?