ಸಿಎಆರ್ ಮುಖ್ಯ ಪೇದೆ ಸುಭಾಷ್ ಚಂದ್ರ 
ರಾಜ್ಯ

ಸಿಎಂ ಸಿದ್ದರಾಮಯ್ಯ ಕಚೇರಿ ಗನ್ ಮ್ಯಾನ್ ವಿರುದ್ಧ ಕೊಲೆ ಪ್ರಕರಣ ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಗನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಸಿಎಆರ್ ಮುಖ್ಯಪೇದೆ ಸುಭಾಷ್ ಚಂದ್ರ ವಿರುದ್ಧ ಕೊಲೆ ಪ್ರಕರಣ ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಗನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಸಿಎಆರ್ ಮುಖ್ಯಪೇದೆ ಸುಭಾಷ್ ಚಂದ್ರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ಪತ್ನಿ ಮತ್ತು ಮಕ್ಕಳಿಗೆ ವಿಷವುಣಿಸಿ ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿ ಸದ್ಯ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇದೆ ಸುಭಾಷ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸುಭಾಷ್ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಆಹಾರ ಮತ್ತು ರಕ್ದ ಮಾದರಿಯನ್ನ ಎಫ್ ಎಸ್ಎಲ್ ಗೆ ಪರೀಕ್ಷೆಗೆ ಕಳುಹಿಸಲಾಗಿದೆ. 
ಸುಭಾಷ್ ಮತ್ತು ವೀಣಾ 4 ವರ್ಷದ ಹಿಂದೆ ವಿವಾಹವಾಗಿದ್ದರು. ಸಿಎಂ ಗೃಹ ಕತೇರಿ ಕೃಷ್ಣಾಗೆ ವರ್ಗಯಿಸಲಾಗಿತ್ತು. ಕೆಲಸದಿಂದ ಮನೆಗೆ ಹಿಂತಿರುಗಿದ ನಂತರ ಆತ ತನ್ನ ಕಟುಂಬಕ್ಕೆ ವಿಷ ಪ್ರಾಷನ ಮಾಡಿಸಿದ್ದಾನೆ  ಸ್ಥಳದಲ್ಲಿ ಇಲಿ ಪಾಷಾಣ ದೊರೆತಿದೆ ಎಂದು ಪೊಲೀಸರು ಹೇಳಿದ್ದಾರೆ. 
ಸುಭಾಷ್ ಸುಮಾರು 25 ಲಕ್ಷ ರು ಸಾಲ ಮಾಡಿದ್ದ. ಐಪಿಎಲ್ ಪ್ರೀಮಿಯರ್ ಲೀಗ್ ನ ಬೆಟ್ಟಿಂಗ್ ನಲ್ಲಿ ಆತ ಹಣ ಕಳೆದುಕೊಂಡಿದ್ದ ಎಂಬುದು ತಿಳಿದು ಬಂದಿದೆ.
ಆತ ಬಹುದೊಡ್ಡ ಪ್ರಮಾಣದಲ್ಲಿ ಸಾಲ ಮಾಡಿದ್ದ ಎಂದು ಆತನ ಸಂಬಂಧಿಗಳು ತಿಳಸಿದ್ದಾರೆ. ಹೀಗಾಗಿ ಬೆಟ್ಟಿಂಗ್ ನಲ್ಲಿ ಹಣ ಕಳೆದು ಕೊಂಡಿದ್ದನೇ ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ ಎಂದು ಈಶಾನ್ಯ ವಲಯ ಡಿಜಿಪಿ ಹರ್ಷ ಹೇಳಿದ್ದಾರೆ.
2006 ರಲ್ಲಿ ಸಿಎಆರ್ ದೆ ಪೇದೆಯಾಗಿ ಸುಭಾಷ್ ಕೆಲಸಕ್ಕೆ ಸೇರಿದ್ದರು. ಆರು ತಿಂಗಳ ಹಿಂದೆ ಬಡ್ತಿ ದೊರೆತು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!