ಫೇಸ್‌ಬುಕ್ 
ರಾಜ್ಯ

ಹೆತ್ತವರ ಸರಸ ಸಲ್ಲಾಪದ ವಿಡಿಯೋವನ್ನು ಫೇಸ್‌ಬುಕ್ ಫ್ರೆಂಡ್ ಗೆ ನೀಡಿದ 13ರ ಪೋರ!

ಸಾಮಾಜಿಕ ಜಾಲತಾಣ ಫೇಸ್ ಬುಕ್ ಚಟಕ್ಕೆ ಬಿದ್ದ 13 ವರ್ಷದ ಬಾಲಕನಿಂದ ಪೋಷಕರು ತೊಂದರೆಗೆ ಸಿಲುಕುವಂತಾಗಿದೆ.

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ಚಟಕ್ಕೆ ಬಿದ್ದ 13 ವರ್ಷದ ಬಾಲಕನಿಂದ ಪೋಷಕರು ತೊಂದರೆಗೆ ಸಿಲುಕುವಂತಾಗಿದೆ. 
ಮಾಗಡಿ ರಸ್ತೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ಖಾಸಗಿ ಕಂಪನಿ ಉದ್ಯೋಗಿಯ ಪುತ್ರ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಬಾಲಕ ಫೇಸ್ಬುಕ್ ನಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿದ್ದ ಇದಕ್ಕೆ 2016 ಜೂನ್ ನಲ್ಲಿ ತೇಜಲ್ ಪಾಟೀಲ್ ಎಂಬಾತ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾನೆ. ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿದ ಬಾಲಕನಿಗೆ ತೇಜಲ್ ಅರೇ ನಗ್ನ ಚಿತ್ರ, ವಿಡಿಯೋಗಳನ್ನು ಕಳುಹಿಸಿದ್ದಾನೆ. ನಂತರ ನಿನ್ನ ಹೆತ್ತವರ ಸರಸ ಸಲ್ಲಾಪದ ವಿಡಿಯೋ ಕಳುಹಿಸುವಂತೆ ಕೇಳಿದ್ದಾನೆ. 
ಮುಂದೆ ಪರಿಣಾಮ ಏನಾಗಬಹುದು ಎಂದು ಯೋಚಿಸದ ಬಾಲಕ ಪೋಷಕರ ಸಲ್ಲಾಪದ ವಿಡಿಯೋವನ್ನು ತೇಜಲ್ ಗೆ ಕಳುಹಿಸಿದ್ದಾನೆ. ವಿಡಿಯೋ ಮತ್ತು ಫೋಟೋಗಳನ್ನು ಪಡೆದ ನಂತರ ತೇಜಲ್ ಬಾಲಕನ ಪೋಷಕರಿಗೆ ಕರೆ ಮಾಡಿ ನಿಮ್ಮ ಮತ್ತು ಮಗನ ನಗ್ನ ಚಿತ್ರಗಳು ನನ್ನ ಬಳಿ ಇವೆ. ನಾನು ಕೇಳಿದಷ್ಟು ಹಣ ನೀಡಿದಿದ್ದರೆ ನಗ್ನ ಚಿತ್ರಗಳನ್ನು ಫೇಸ್ ಬುಕ್ ನಲ್ಲಿ ಅಪಲೋಡ್ ಮಾಡುವುದಾಗಿ ಹೆದರಿಸಿದ್ದ ಇದರಿಂದ ಹೆದರಿದ ಬಾಲಕನ ಫೋಷಕರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. 
ಇನ್ನು ದೂರು ಸ್ವೀಕರಿಸಿದ ಪೊಲೀಸರು ಪೋಕ್ಸೋ ಕಾಯ್ದೆ-2012ರ ಸೆಕ್ಷನ್ 15(ಮಕ್ಕಳ ಅಶ್ಲೀಲ ಚಿತ್ರಗಳ ಸಂಗ್ರಹ ಅಪರಾಧ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಸೆಕ್ಷನ್ ಗಳಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಇನ್ನು ತೇಜಲ್ ಪಾಟೀಲ್ ಎಂಬ ಫೇಸ್ ಬುಕ್ ಖಾತೆ ನಕಲಿಯೋ ಅಥವಾ ಅಸಲಿಯೋ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT