ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮೂವರು ಪಾಕ್ ಪ್ರಜೆಗಳು ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರು ಪಾಸ್ ಪೋರ್ಟ್ ಮತ್ತು ವೀಸಾ ಇಲ್ಲದೇ ಕತಾರ್ ಮತ್ತು ಪಾಕಿಸ್ತಾನದಿಂದ ಬಂದವರಾಗಿದ್ದು ಪ್ರೀತಿ, ಪ್ರೇಮ ಮದುವೆ ವಿಚಾರ ಹೊರತು ಪಡಿಸಿ ಬೇರೆ ಯಾವುದೇ ವಿಚಾರಗಳು ಬಂಧಿತರಿಂದ ತಿಳಿದುಬಂದಿಲ್ಲ. ಅಲ್ಲದೆ ಬೇರೆ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ಸುಳಿವು ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳ ಮೂಲದ ಸಿಹಾಬ್ ನ ನೆರವಿನಿಂದಲೇ ನಗರದಲ್ಲಿ ನಜ್ಮಾ ಸಮೀರಾ ಮತ್ತು ಜಿನಬ್ ಕಿರಣ್ ಇಬ್ಬರೂ ನಕಲಿ ಗುರುತಿನ ಚೀಟಿಗಳನ್ನು ಪಡೆದು ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.