ಹಿರಿಯೂರು(ಚಿತ್ರದುರ್ಗ): ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಸಂಭವಿಸಿದೆ.
ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ರಾಷ್ಟ್ರೀಯ ಹೆದ್ದಾರಿ(ಎ)ಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ.
ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.