ಸಂಗ್ರಹ ಚಿತ್ರ 
ರಾಜ್ಯ

ಸಕಲ ಸರ್ಕಾರಿ ಗೌರವದೊಂದಿಗೆ ಪಾರ್ವತಮ್ಮ ರಾಜ್ ಕುಮಾರ್ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ

ಸಕಲ ಸರ್ಕಾರಿ ಗೌರವಗಳೊಂದಿಗೆ ಪಾರ್ವತಮ್ಮ ರಾಜ್ ಕುಮಾರ್ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಪಾರ್ವತಮ್ಮ ರಾಜ್ ಕುಮಾರ್ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ನಿಧನರಾದ ಪಾರ್ವತಮ್ಮ ರಾಜ್ ಕಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕನ್ನಡ ಚಿತ್ರರಂಗದ ಏಳಿಗೆಯಲ್ಲಿ  ಪಾರ್ವತಮ್ಮ ರಾಜ್ ಕುಮಾರ್ ಪಾತ್ರ ಅಮೂಲ್ಯವಾಗಿದೆ. ಪಾರ್ವತಮ್ಮ ಅವರು ಮೂಲತಃ ನಮ್ಮ ಮೈಸೂರಿನವರು. ರಾಜ್ ಕುಮಾರ್ ಅವರ ಯಶಸ್ಸಿನಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರ ಮಹತ್ವದ ಪಾತ್ರವಿದೆ.  ನಿರ್ಮಾಪಕಿಯಾಗಿ, ಹಂಚಿಕೆದಾರರಾಗಿ ಚಿತ್ರರಂಗಕ್ಕೆ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಇದಕ್ಕೂ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಮೊದಲು ಪಾರ್ಥೀವ ಶರೀರದ ದರ್ಶನ ಪಡೆದು ಬಳಿಕ  ಸಿಎಂ ಸಿದ್ದರಾಮಯ್ಯ ಅವರು, ಪಾರ್ವತಮ್ಮ ರಾಜ್ ಕುಮಾರ್ ಪುತ್ರರಾದ ಶಿವರಾಜ್  ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಅವರಿಗೆ ಸಾಂತ್ವನ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಆಂಜನೇಯ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಮತ್ತು  ಅಧಿಕಾರಿಗಾಳು ಸಾಥ್ ನೀಡಿದರು.

ಇದಕ್ಕೂ ಮೊದಲು ಗೃಹ ಸಚಿವ ಪರಮೇಶ್ವರ ಅವರೂ ಕೂಡ ಪಾರ್ವತಮ್ಮ ರಾಜ್ ಕುಮಾರ್ ಅವರ ಪಾರ್ಥೀವ ಶರೀದ ದರ್ಶನ ಪಡೆದು ಅಂತ್ಯ ಸಂಸ್ಕಾರದ ಕುರಿತು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT