ರಾಜ್ಯ

ಸರ್ಕಾರದಿಂದ ರೈತರ ಸಾಲ ಮನ್ನಾ: ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

Shilpa D
ಮೈಸೂರು: ರೈತರ ಸಾಲಮನ್ನಾ ಮಾಡುವಂತೆ  ಪ್ರತಿಪಕ್ಷಗಳ ಸತತ ಒತ್ತಡಕ್ಕೆ ಮಣಿದಿರುವ ಸಿಎಂ ಸಿದ್ದರಾಮಯ್ಯ ಸಾಲಮನ್ನಾ ಮಾಡುವ ನಿರ್ಧಾರದ ಕುರಿತು ಸಣ್ಣ ಸುಳಿವು ನೀಡಿದ್ದಾರೆ.
ಬುಧವಾರ ಪಿರಿಯಾಪಟ್ಟಣದಲ್ಲಿ 502 ಕೋಟಿ ರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಎಲ್ಲಾ ಬೆಳವಣಿಗೆಗಳನ್ನು ತುಂಬಾ ಹತ್ತಿರದಿಂದ ಗಮನಿಸುತ್ತಿದ್ದೇನೆ, ನಾನು ಕಾದು ನೋಡುತ್ತಿದ್ದೇನೆ, ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ,
ರೈತರ ಸಾಲಮನ್ನಾ ವಿಷಯದಲ್ಲಿ ಕೇಂದ್ರ ಸರ್ಕಾರ ಧ್ವಂಧ್ವ ನೀತಿ ಅನುಸರಿಸುತ್ತಿದೆ,  ಕೇಂದ್ರ ಕೃಷಿ ಸಚಿವರು ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೈತರ ಸಾಲಮನ್ನಾಗೆ ತೀವ್ರ ವಿರೋಧ ವ್ಯಕ್ತ ಪಡಿಸುತ್ತಿವೆ. ಆದರೆ ಉತ್ತರ ಪ್ರದೇಶಕ್ಕೆ ಮಾತ್ರ ಕೇಂದ್ರ ಸರ್ಕಾರ ಅನುದಾನ ನೀಡಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
2018ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರೈತರ ಸಾಲಮನ್ನಾ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ತಾವು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಘೋಷಿಸುತ್ತಿವೆ.
SCROLL FOR NEXT