ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಗೃಹ ಸಚಿವ ಸ್ಥಾನಕ್ಕೆ ಡಾ.ಜಿ. ಪರಮೇಶ್ವರ್ ರಾಜಿನಾಮೆ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನೇ ಮುಂದುವರೆಸುವಂತೆ ಹೈಕಮಾಂಡ್ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಗೃಹ ಸಚಿವ ಸ್ಥಾನಕ್ಕೆ ಡಾ.ಜಿ.ಪರಮೇಶ್ವರ್ ಅವರು ಗುರುವಾರ ರಾಜಿನಾಮೆ ಸಲ್ಲಿಸಿದ್ದಾರೆ...

ಡಾ.ಜಿ.ಪರಮೇಶ್ವರ್
Manjula VN
Updated On : 1 Jun 2017, 1:22 am
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನೇ ಮುಂದುವರೆಸುವಂತೆ ಹೈಕಮಾಂಡ್ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಗೃಹ ಸಚಿವ ಸ್ಥಾನಕ್ಕೆ ಡಾ.ಜಿ.ಪರಮೇಶ್ವರ್ ಅವರು ಗುರುವಾರ ರಾಜಿನಾಮೆ ಸಲ್ಲಿಸಿದ್ದಾರೆ. 
ವಿಕಾಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಪರಮೇಶ್ವರ್ ಅವರು, ಮುಂದಿನ ವಿಧಾನಸಭಾ ಚುನಾವಣೆ ತಯಾರಿ ಹಿನ್ನಲೆಯಲ್ಲಿ ಹೈಕಮಾಂಡ್ ಸೂಚನೆ ನೀಡಿದ್ದು, ಸೂಚನೆಯಂತೆಯೇ ಗೃಹ ಖಾತೆಗೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ. 
ಗೃಹ ಸಚಿವ ಸ್ಥಾನ ಅತ್ಯಂತ ಜವಾಬ್ದಾರಿಯುತ ಹುದ್ದೆಯಾಗಿದ್ದು, 1 ವರ್ಷ 7 ತಿಂಗಳುಗಳ ಕಾಲ ಉತ್ತಮ ರೀತಿಯಲ್ಲಿ ನಿಭಾಯಿಸಿದ್ದಾರೆ, ನನ್ನೊಂದಿಗೆ ಸಹಕರಿಸಿದ ಎಲ್ಲರಿಗೂ ಆಭಾರಿಯಾಗಿದ್ದೇನೆ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವಂತೆ ಹೈಕಮಾಂಡ್ ಸೂಚಿಸಿದ್ದು, ಪಕ್ಷದ ಶಿಸ್ತಿನ ಸಿಪಾಯಿಯಂತೆ ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆಂದು ತಿಳಿಸಿದ್ದಾರೆ. 

Advertisement

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿದ್ದು, ನಗರಕ್ಕೆ ವಾಪಸ್ಸಾಗುತ್ತಿದ್ದಂತೆಯೇ ರಾಜಿನಾಮೆ ಪತ್ರವನ್ನು ಅವರಿಗೆ ನೀಡುತ್ತೇನೆ. ವರಿಷ್ಠರ ಸೂಚನೆಯಂತೆಯೇ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement