ಮ್ಯಾಟ್ರಿಕ್ಸ್ ಇಮೇಜಿಂಗ್ ಟೆಂಡರ್ ಪ್ರಕರಣ: ಸಿಎಂ ಪುತ್ರ ಯತೀಂದ್ರಗೆ ಎಸಿಬಿ ಕ್ಲೀನ್ ಚಿಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಮ್ಯಾಟ್ರಿಕ್ಸ್ ಇಮೇಜಿಂಗ್ ಸೆಲ್ಯೂಷನ್ ಕಂಪೆನಿ ಟೆಂಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕ್ಲೀನ್ ಚಿಟ್ ನೀಡಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಮ್ಯಾಟ್ರಿಕ್ಸ್ ಇಮೇಜಿಂಗ್ ಸೆಲ್ಯೂಷನ್ ಕಂಪೆನಿ ಟೆಂಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕ್ಲೀನ್ ಚಿಟ್ ನೀಡಿದೆ. ಸಿಎಂ ಪುತ್ರ ಯತೀಂದ್ರ ವಿರುದ್ಧ ವಿಚಾರಣೆಯನ್ನು ಮುಕ್ತಾಯಗೊಳಿಸಿದ ಎಸಿಬಿ ಅವರ ವಿರುದ್ಧ ಅಆಪಾದನೆಗಳು ಸಾಬೀತುಗೊಳ್ಳದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಕ್ತಾಯಗೊಳಿಸುತ್ತಿರುವುದಾಗಿ ಹೇಳಿದೆ.
ಸಿದ್ದರಾಮಯ್ಯ್ ಪುತ್ರ ಯತೀಂದ್ರ ಮ್ಯಾಟ್ರಿಕ್ಸ್ ಇಮೇಜಿಂಗ್ ಸಲ್ಯೂಷನ್ ಇಂಡಿಯಾ ಸಂಸ್ಥೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ರಧಾನಮಂತ್ರಿ ಸ್ವಸ್ಥ ಸುರಕ್ಷಾ ಯೋಜನೆಯಡಿ ಡಯಾಗ್ನೊಸ್ಟಿಕ್ ಸರ್ವಿಸಸ್ ಆರಂಭಿಸಲು ನಿಯಮಬಾಹಿರವಾಗಿ ನೀಡಲಾಗಿದೆ. ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಎಸ್. ಭಾಸ್ಕರನ್ 2016ರ ಮೇ 23 ರಂದು ದೂರು ಸಲ್ಲಿಸಿದ್ದರು. ಇದರೊಡನೆ ಮುಖ್ಯಮಂತ್ರಿಗಳು ಸ್ವಜನ ಪಕ್ಷಪಾತ ನಡೆಸುತ್ತಿದ್ದಾರೆ ಎಂದು ಎಸಿಬಿ ಮತ್ತು ರಾಜ್ಯಪಾಲರ ಬಳಿ ಆರೋಪಿಸಿದ್ದರು
ಇದೀಗ ಎಸಿಬಿ ವಿಚಾರಣೆ ಮುಕ್ತಾಯಗೊಳಿಸಿದ್ದುಾರೋಪ ಸಾಬೀತಾಗದ ಹಿನ್ನೆಲೆಯಲ್ಲಿ ವಿಚಾರಣೆ ನಿಲ್ಲಿಸಿರುವುದಾಗಿ ಎಸಿಬಿ ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.