ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ತವ್ಯದ ವೇಳೆ ಪೊಲೀಸ್ ಠಾಣೆಯಲ್ಲಿಯೇ ಪೇದೆ ಸಾವು

ಹೃದಯ ಸ್ತಂಭನದಿಂದಾಗಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ...

ಚಿಕ್ಕಮಗಳೂರು: ಹೃದಯ ಸ್ತಂಭನದಿಂದಾಗಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. 
ವೈ.ಎಸ್. ಮಲ್ಲಿಕಾರ್ಜುನ (38) ಮೃತಪಟ್ಟ ಪೇದೆಯಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದ ಹಿನ್ನಲೆಯಲ್ಲಿ ಮಲ್ಲಿಕಾರ್ಜುನ ಅವರನ್ನು ಧರ್ಮಸ್ಥಳದಲ್ಲಿ ಕರ್ತವ್ಯ ನಿರ್ವಹಿಸುವಂತೆ ನಿಯೋಜಿಸಲಾಗಿತ್ತು. 
ಮಲ್ಲಿಕಾರ್ಜುನ ಅವರು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಅವರಿಗೆ ಇದ್ದಕ್ಕಿದ್ದಂತೆ ಹೃದಯ ಸ್ತಂಭನ ಎದುರಾಗಿದೆ. ಬಳಿಕ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಸಿಬ್ಬಂದಿಗಳು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಲ್ಲಿಕಾರ್ಜುನ ಅವರು ಸಾವನ್ನಪ್ಪಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ