ನಾಳೆ ಖಾಸಗಿ ವೈದ್ಯರ ಮುಷ್ಕರ: ಹೊರರೋಗಿಗಳ ಸೇವೆ ಬಂದ್
ಕರ್ನಾಟಕ ಖಾಸಗಿ ಆಸ್ಪತ್ರೆಗಳ ತಿದ್ದುಪಡಿಗಳ ಕಾಯ್ದೆ ವಿರೋಧಿಸಿ ನಾಳೆ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ...
ಬೆಂಗಳೂರು: ಕರ್ನಾಟಕ ಖಾಸಗಿ ಆಸ್ಪತ್ರೆಗಳ ತಿದ್ದುಪಡಿಗಳ ಕಾಯ್ದೆ ವಿರೋಧಿಸಿ ನಾಳೆ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಖಾಸಗಿ ಆಸ್ಪತ್ರೆಯ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಹೊರರೋಗಿಗಳ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ರಾಜ್ಯ ಸರ್ಕಾರದ ಈ ಕಾಯ್ದೆಯ ವಿರುದ್ಧ ಜೂನ್ 16ರಂದು ಪ್ರತಿಭಟನೆ ನಡೆಸಿದ್ದವು. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಆರೋಗ್ಯ ಸಚಿವರನ್ನು ಭೇಟಿ ಮಾಡಿ ನಮ್ಮ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ಚರ್ಚೆ ಮಾಡಿದ್ದೇವು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ರವೀಂದ್ರ ಹೇಳಿದ್ದಾರೆ.
ವೈದ್ಯರ ಮುಷ್ಕರ ಹಿನ್ನೆಲೆ ನಾಳೆ ಯಾವುದೇ ರೀತಿಯ ಶಸ್ತ್ರಚಿಕಿತ್ಸೆ ಮಾಡಲಾಗುವುದಿಲ್ಲ. ಸಾಂಕೇತಿಕವಾಗಿ ಹೊರ ರೋಗಿಗಳ ಸೇವೆ ಸ್ಧಗಿತಗೊಳಿಸುತ್ತೇವೆ. ಸರ್ಕಾರ ಆಗಲೂ ಮಾತು ಕಥೆಗೆ ಮುಂದಾಗಿದ್ದರೆ ನವೆಂಬರ್ 9 ಹಾಗೂ 10ರಂದು ವೈದ್ಯ ವೃತ್ತಿಯನ್ನು ತ್ಯಜಿಸುತ್ತೇವೆ ಎಂದು ರವೀಂದ್ರ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಒಟ್ಟು ಐವತ್ತು ಸಾವಿರ ಖಾಸಗಿ ಆಸ್ಪತ್ರೆಗಳಿದ್ದು ಎಲ್ಲಾ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.