ಎಲ್'ಪಿಜಿ ಗ್ಯಾಸ್ ಸ್ಫೋಟ; ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸಹೋದರರು ಸಾವು 
ರಾಜ್ಯ

ಎಲ್'ಪಿಜಿ ಗ್ಯಾಸ್ ಸ್ಫೋಟ; ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸಹೋದರರು ಸಾವು

ಕಾಡುಗೋಡಿಯಲ್ಲಿ ಸಂಭವಿಸಿದ್ದ ಎಲ್'ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ಬೆಂಗಳೂರು: ಕಾಡುಗೋಡಿಯಲ್ಲಿ ಸಂಭವಿಸಿದ್ದ ಎಲ್'ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 

ಮೃತರನ್ನು ಐಟಿಪಿಎಲ್ ನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ನರೇಂದ್ರ ಶರ್ಮಾ (31), ಹರೇಂದ್ರ ಎಂದು ಗುರ್ತಿಸಲಾಗಿದೆ. 

ವೀರಸ್ವಾಮಿ ಲೇ ಐಟ್ ನಲ್ಲಿರುವ ಮನೆಯೊಂದರಲ್ಲಿ ಭಾನುವಾರ ಎಲ್'ಪಿಜಿ ಸಿಲಿಂಡರ್ ಸ್ಫೋಟಗೊಂಡು 5 ತಿಂಗಳ ಮಗು ಸೇರಿದಂತೆ ಒಟ್ಟು ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. 

ಸ್ಫೋಟದಲ್ಲಿ ನರೇಂದ್ರ ಶರ್ಮಾ ಅವರ ಪತ್ನಿ ಶಿಲ್ಪ ಹಾಗೂ 5 ತಿಂಗಳ ಮಗು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. 

ಮೃತರ ಕುಟುಂಬಸ್ಥರು ಉತ್ತರಪ್ರದೇಶದ ಆಗ್ರಾದಲ್ಲಿದ್ದು, ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಶಿಲ್ಪಾ ಹಾಗೂ ಮಗುವನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ. 

ಪೊಲೀಸರಿಗೆ ಹೇಳಿಕೆ ನೀಡಿರುವ ಶಿಲ್ಪಾ ಅವರು, ಹರೇಂದ್ರ ಅವರು ಎಂಸಿಎ ಪದವೀಧರನಾಗಿದ್ದು, ಉದ್ಯೋಗ ಹರಸಿ ನಗರಕ್ಕೆ ಬಂದಿದ್ದ. ಭಾನುವಾರ ಬೆಳಿಗ್ಗೆ 6.30ರ ಸುಮಾರಿಗೆ ಟೀ ಮಾಡುವ ಸಲುವಾಗಿ ಅಡುಗೆ ಮನೆಗೆ ಹೋಗಿದ್ದ. ಈ ವೇಳೆ ಗ್ಯಾಸ್ ಲೀಕ್ ಆಗುತ್ತಿರುವ ವಾಸನೆ ಬಂದಿದೆ. ಬಳಿಕ ರೆಗ್ಯುಲೇಟರ್ ನ್ನು ಸರಿಪಡಿಸಲು ಮುಂದಾಗಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಸಿಲಿಂಡರ್ ಸ್ಫೋಟಗೊಂಡ ಸಂದರ್ಭದಲ್ಲಿ ನಾನು ನನ್ನ ಪತಿಯನ್ನು ಎದ್ದೇಳಿಸಲು ರೂಮಿಗೆ ಹೋಗಿದ್ದೆ ಎಂದು ಹೇಳಿಕೊಂಡಿದ್ದಾರೆ. 

ಸಿಲಿಂಡರ್ ಸ್ಫೋಟಗೊಳ್ಳುತ್ತಿದ್ದಂತೆಯೇ ಸ್ಥಳೀಯರು ಗಾಯಾಳುಗಳನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸಿಲಿಂಡರ್ ಸ್ಫೋಟಗೊಂಡಿರುವ ತೀವ್ರತೆಗೆ ನೆರೆಮನೆಗಳು ಕೂಡ ನಾಶವಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT