ಸಾಂದರ್ಭಿಕ ಚಿತ್ರ 
ರಾಜ್ಯ

ಸಿಎಂ ಘೋಷಣೆ ಮಾಡಿದ ಮರುದಿನವೇ ಮುಚ್ಚಿದ 8 ಕನ್ನಡ ಶಾಲೆಗಳು!

ಒಬ್ಬ ವಿದ್ಯಾರ್ಥಿಯಿದ್ದರೂ ಕೂಡ ಕನ್ನಡ ಶಾಲೆಯನ್ನು ಮುಚ್ಚುವುದಿಲ್ಲ ಎಂದು ರಾಜ್ಯೋತ್ಸವದ ದಿನ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ, ಬೆಂಗಳೂರು...

ಬೆಂಗಳೂರು: ಒಬ್ಬ ವಿದ್ಯಾರ್ಥಿಯಿದ್ದರೂ ಕೂಡ ಕನ್ನಡ ಶಾಲೆಯನ್ನು ಮುಚ್ಚುವುದಿಲ್ಲ ಎಂದು ರಾಜ್ಯೋತ್ಸವದ ದಿನ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ, ಬೆಂಗಳೂರು ದಕ್ಷಿಣ ವಲಯದ 8 ಕನ್ನಡ ಶಾಲೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. 
ಸಾರ್ವಜನಿಕ ಶಿಕ್ಷಣ ಇಲಾಖೆ ಅನುದಾನಿತ 8 ಕನ್ನಡ ಶಾಲೆಗಳನ್ನು ಮುಚ್ಚುವಂತೆ ಸುತ್ತೋಲೆ ಹೊರಡಿಸಿದೆ.  ಈ ಶಾಲೆಗಳಲ್ಲಿ 25 ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಕಾರಣ ಶಾಲೆ ಮುಚ್ಚುವಂತೆ ಸುತ್ತೋಲೆ ಹೊರಡಿಸಲಾಗಿದೆ.
ಶಾಲೆಯೊಂದರಲ್ಲಿ ಕನಿಷ್ಠ 25 ವಿದ್ಯಾರ್ಥಿಗಳಿರುವುದು ಕಡ್ಡಾಯವಾಗಿದೆ, ಆದರೆ ಕಳೆದ ಮೂರು ವರ್ಷಗಳಿಂದ ಈ ಶಾಲೆಗಳಲ್ಲಿ ಅಷ್ಟು ಪ್ರಮಾಣದ ವಿದ್ಯಾರ್ಥಿಗಳಿಲ್ಲ,ಹೀಗಾಗಿ ಶಾಲೆಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಒಬ್ಬ ವಿದ್ಯಾರ್ಥಿ ಇದ್ದರೂ ತರಗತಿ ನಡೆಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. 1983 ರ ಕರ್ನಾಟಕ ಶಿಕ್ಷಣ ಕಾಯ್ದೆ ನಿಯಮದ ಅನ್ವಯ, ನೋಟಿಸ್ ನೀಡಲಾಗಿದೆ ಎಂದು ಹೇಳಲಾಗಿದೆ. ಕಳೆದ ಒಂದು ತಿಂಗಳಿಂದ ನೋಟೀಸ್ ಕಳುಹಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ