ಚಾಮುಂಡೇಶ್ವರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯ ಅವರು ಕ್ಷೇತ್ರ ಬದಲಿಸುವ ಅಗತ್ಯವಿಲ್ಲ. ಅವರು ಮುಂದಿನ ಪ್ರಧಾನಿ ಅಭ್ಯರ್ಥಿ ಅದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ನನ್ನನ್ನು ಕಂಡರೆ ಭಯ ಎಂದಿದ್ದಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿ ದೇವೇಗೌಡ ಅವರು ಹೇಳಿದ್ದಾರೆ.
ಬಿಜೆಪಿಯಿಂದಾಗಿ ದೇಶದೆಲ್ಲೆಡೆ ಕಾಂಗ್ರೆಸ್ ನಶಿಸಿ ಹೋಗುತ್ತಿದೆ. ಮೋದಿ ವಿರುದ್ಧ ಮಾತನಾಡುವ ನಾಯಕರು ಕಾಂಗ್ರೆಸ್ ನಲ್ಲಿ ಇಲ್ಲ. ಸಿದ್ದರಾಮಯ್ಯ ಅವರು ಮಾತ್ರ ಮಾತನಾಡುತ್ತಿದ್ದಾರೆ ಅವರಿಗೆ ಪ್ರಧಾನಿ ಆಗುವ ಆಸೆ ಇದೆ ಎಂದು ಜಿಟಿ ದೇವೇಗೌಡ ಅವರು ಹೇಳಿದ್ದಾರೆ.