ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಲಿಂಗಾಯತರಿಗೆ ಅಲ್ಪಸಂಖ್ಯಾತ ಮಾನ್ಯತೆ: ಅಲ್ಪಸಂಖ್ಯಾತ ಆಯೋಗದ ಸಲಹೆ ಕೇಳಲು ರಾಜ್ಯ ಸರ್ಕಾರ ಚಿಂತನೆ

ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ರಾಜ್ಯದ್ಯಂತ ಬಲವಾಗುತ್ತಿದ್ದು, ಈ ನಡುವೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರ ಕುರಿತು ಅಲ್ಪಸಂಖ್ಯಾತ ಆಯೋಗದ ಸಲಹೆಗಳನ್ನು ಕೇಳಲು ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ...

ಮೈಸೂರು: ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ರಾಜ್ಯದ್ಯಂತ ಬಲವಾಗುತ್ತಿದ್ದು, ಈ ನಡುವೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರ ಕುರಿತು ಅಲ್ಪಸಂಖ್ಯಾತ ಆಯೋಗದ ಸಲಹೆಗಳನ್ನು ಕೇಳಲು ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. 


ಲಿಂಗಾಯತವನ್ನು ಪ್ರತ್ಯೇಕ ಧರ್ಮವೆಂದು ಘೋಷಣೆ ಮಾಡುವಂತೆ ನಿನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶವನ್ನು ನಡೆಸಲಾಯಿತು. ಪ್ರತ್ಯೇಕ ಧರ್ಮದ ಕೂಗು ಕುರಿತಂತೆ ರಾಜ್ಯದಲ್ಲಿ ಮೊಳಗುತ್ತಿರುವ ಹೋರಾಟಗಳನ್ನು ಗಂಭೀರವಾಗಿ ಗಮನಿಸುತ್ತಿರುವ ರಾಜ್ಯ ಸರ್ಕಾರ ಚುನಾವಣಾ ಘೋಷಣೆಗಳಿಗೂ ಮುನ್ನ ವಿಚಾರವನ್ನು ಕೇಂದ್ರದ ಗಮನಕ್ಕೆ ತರಲು ಯತ್ನಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ವೀರಶೈವರ ಮತಗಳನ್ನು ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ವೋಟ್ ಬ್ಯಾಂಕ್ ರಾಜಕೀಯವನ್ನು ಅಂತಿಮಗಳಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ಹಲವು ತಂತ್ರಗಳನ್ನು ರೂಪಿಸುತ್ತಿದೆ. ಉತ್ತರ ಕರ್ನಾಟಕದಲ್ಲಿ ವೀರಶೈವರ ಸಂಖ್ಯೆ ಹೆಚ್ಚಾಗಿದ್ದು, ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನವನ್ನು ನೀಡಿದ್ದೇ ಆದರೆ, ಇದು ಬಿಜೆಪಿ ಭವಿಷ್ಯದ ಮೇಲೆ ಭಾರೀ ಹೊಡೆತ ಬಿದ್ದಂತಾಗುತ್ತದೆ. ಸಂಪುಟದಲ್ಲಿರುವ ವೀರಶೈವ ಸಚಿವರಿಗೂ ಹೊಡೆತ ಬೀಳಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!