ಸಾಂದರ್ಭಿಕ ಚಿತ್ರ 
ರಾಜ್ಯ

ಕೊಪ್ಪಳ: ತಂದೆ, ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲು

ಈಜಲು ತೆರಳಿದ್ದ ಹೈದರಾಬಾದ್ ಮೂಲದ ಐವರು ನೀರುಪಾಲಾದ ದಾರುಣ ಘಟನೆ ಸೋಮವಾರ ಕೊಪ್ಪಳ ಜಿಲ್ಲೆಯ ಗಂಗಾವತಿ....

ಕೊಪ್ಪಳ: ಈಜಲು ತೆರಳಿದ್ದ ಹೈದರಾಬಾದ್ ಮೂಲದ ಐವರು ನೀರುಪಾಲಾದ ದಾರುಣ ಘಟನೆ ಸೋಮವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡ ಕೆರೆಯಲ್ಲಿ ಸಂಭವಿಸಿದೆ.
ಹೈದರಾಬಾದ್ ಮೂಲದ ರಾಘವೇಂದ್ರ ಎಂಬವರು ಇಂದು ಬೆಳಗ್ಗೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ತಮ್ಮ ನಾಲ್ವರು ಮಕ್ಕಳ ಜತೆ ಹೇಮಗುಡ್ಡದ ಕೆಳಗಡೆ ಇರುವ ಕೆರೆಯಲ್ಲಿ ಈಜಲು ತೆರಳಿದ್ದರು.
ಈಜಾಡುತ್ತಿದ್ದಾಗಲೇ ಆಳಕ್ಕೆ ಸಿಲುಕಿದ್ದ ಮಕ್ಕಳನ್ನು ತಂದೆ ರಕ್ಷಿಸಲು ಹೋದ ಸಂದರ್ಭದಲ್ಲಿ ಸುಳಿಗೆ ಸಿಲುಕಿ ಐವರೂ ನೀರುಪಾಲಾಗಿರುವುದಾಗಿ ಪ್ರತ್ಯಕ್ಷದರ್ಶಿ ಸಂಗಮೇಶ್ ಅವರು ತಿಳಿಸಿದ್ದಾರೆ. 
ಮೃತರು ರಾಘವೇಂದ್ರ (35), ಪವಿತ್ರ (14), ಪವನಿ (12), ಪೌರ್ಣಿಕಾ, ಆಶೀಶ್(14) ಎಂದು ಗುರುತಿಸಲಾಗಿದೆ.
ನೀರುಪಾಲಾದ ಐವರ ಮೃತದೇಹವನ್ನು ಸ್ಥಳೀಯ ಈಜುಗಾರರ ಸಹಾಯದಿಂದ ಮೇಲಕ್ಕೆ ತರಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 
ಘಟನೆಗೆ ಸಂಬಂಧಿಸಿದಂತೆ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!