ತೀವ್ರಗೊಂಡ ಟಿಪ್ಪು ಜಯಂತಿ ವಿರೋಧಿ ಪ್ರತಿಭಟನೆ: ಕೊಡಗಿನಲ್ಲಿ ಸೆಕ್ಷನ್ 144 ಜಾರಿ
ವಿರೋಧದ ನಡುವೆಯೂ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ.
ಕೊಡಗು: ವಿರೋಧದ ನಡುವೆಯೂ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಅತ್ತ ಟಿಪ್ಪು ಜಯಂತಿ ಆಚರಣೆ ನಡೆಯುತ್ತಿದ್ದರೆ ಇತ್ತ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಯುತ್ತಿದ್ದು, ಕೆಲವು ಕಿಡಿಗೇಡಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಮಡಿಕೇರಿಯಲ್ಲಿ ಟಿಪ್ಪು ಜಯಂತಿಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಆಳಿತ ಸೆಕ್ಷನ್ 144 ನ್ನು ಹೇರಿದ್ದು, ಭದ್ರತೆಯನ್ನು ಹೆಚ್ಚಿಸಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ನಿಷೇದಾಜ್ಞೆ ನಡುವೆಯೇ ಟಿಪ್ಪು ಜಯಂತಿಯನ್ನು ಆಚರಿಸಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.