ಬಿಜೆಪಿ ಶಾಸಕ ಸಂಜಯ್ ಪಾಟೀಲ್ 
ರಾಜ್ಯ

ಟಿಪ್ಪು ಜಯಂತಿ ಕುರಿತು ಪ್ರಚೋದನಕಾರಿ ಭಾಷಣ: ಶಾಸಕ ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು

ಟಿಪ್ಪು ಜಯಂತಿ ಆಚರಣೆ ಕುರಿತಂತೆ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿರುದ್ದ ಬೆಳವಾಗಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ಬೆಳಗಾವಿ: ಟಿಪ್ಪು ಜಯಂತಿ ಆಚರಣೆ ಕುರಿತಂತೆ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿರುದ್ದ ಬೆಳವಾಗಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಬುಧವಾರ ಸಾರ್ವಜನಿಕ ಭಾಷಣೆ ಮಾಡಿದ್ದ ಸಂಜಯ್ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಈ ವೇಳೆ ಕೋಮು ಸಾಮರಸ್ಯ ಕದಡುವ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನಲೆಯಲ್ಲಿ ಪೊಲೀಸರು ಪಾಟೀಲ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಎದುರು ನಡೆದಿದ್ದ ಟಿಪ್ಪು ಜಯಂತಿ ಆಚರಣೆ ವಿರೋಧಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪಾಟೀಲ್ ಅವರು ಕೋಮು ಭಾವನೆಗೆ ದಕ್ಕೆ ತರುವಂತ ಮಾತುಗಳನ್ನು ಆಡಿದ್ದರು ಎಂದು ಹೇಳಲಾಗಿತ್ತು. 
ಭಾಷಣ ಮಾಡುವ ಭರಾಟೆಯಲ್ಲಿದ್ದ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮಸ್ಥಳ ಮೈಸೂರೋ ಅಥವಾ ಲಾಹೋರೋ ಎಂದು ಪ್ರಶ್ನೆ ಮಾಡಿದ್ದರು. ಅಲ್ಲದೆ, ಭಾಷಣದುದ್ದಕ್ಕೂ ರಾಜ್ಯ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ ಉಗ್ರವಾಗಿ ವಾಗ್ದಾಳಿ ನಡೆಸಿದ್ದರು. 
ಈ ಹಿನ್ನಲೆಯಲ್ಲಿ ಪಾಟೀಲ್ ವಿರುದ್ಧ ಐಪಿಸಿ ಸೆಕ್ಷನ್ 153 (ಎ), 143, 149, 188, 283 and 289 ಅನ್ವಯ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಲೋಕಭವನಕ್ಕೆ ಆಗಮಿಸಿದ ಸಿದ್ದರಾಮಯ್ಯ, ಶೀಘ್ರದಲ್ಲೇ ರಾಜೀನಾಮೆ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT