ಸರ್ವೋಚ್ಚ ನ್ಯಾಯಾಲಯ 
ರಾಜ್ಯ

ಮೊಗೇರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ, ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಮೊಗೇರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಇಂದು ಸುಪ್ರಿಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕದ ಹಿಂದುಳಿದ ಸಮುದಾಯಗಳಲ್ಲಿ ಒಂದಾಗಿರುವ ಮೊಗೇರ ಸಮುದಾಯವನ್ನು ....

ನವದೆಹಲಿ: ಮೊಗೇರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಇಂದು ಸುಪ್ರಿಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕದ ಹಿಂದುಳಿದ ಸಮುದಾಯಗಳಲ್ಲಿ ಒಂದಾಗಿರುವ ಮೊಗೇರ ಸಮುದಾಯವನ್ನು  ಪರಿಶಿಷ್ಟ ಪಂಗಡಕ್ಕೆಸೇರಿಸುವ ಮೂಲಕ ಈ ಸಮುದಾಯದವರು ಬಹಳ ಹಿಂದಿನಿಂದ ನಡೆಸುತ್ತಿದ್ದ ಹೋರಾಟಕ್ಕೆ ಜಯ ಲಭಿಸಿದೆ.
ಈ ಹಿಂದೆ ಮೊಗೇರರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಕರ್ನಾಟಕ ಹೈ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮೇಲ್ಮನವಿ ಅರ್ಜಿಯನ್ನು ತಿರಸ್ಕರಿಸಿ ಹೈ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.
ಏನಿದು ಪ್ರಕರಣ?
ಕರ್ನಾಟಕ ಕರಾವಳಿ ಸೀಮೆಯಲ್ಲಿನ ಚಿಕ್ಕ ಸಮುದಾಯವಾಗಿರುವ ಮೊಗೇರರು ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಹೆಚ್ಚಾಗಿ ವಾಸವಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೊಗೇರರನ್ನು ಇದಾಗಲೇ ಪರಿಶಿಷ್ಟರ ಪಟ್ಟಿಗೆ ಸೇರಿಸಲಾಗಿದ್ದು ಉತ್ತರ ಕನ್ನಡದವರು ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ಕಾರಣ ಅವರನ್ನು ಪ್ರವರ್ಗ 1ಕ್ಕೆ  ಸೇರಿಸಲಾಗಿತ್ತು.
ಆದರೆ ಅವರಲ್ಲಿ ಕೆಲವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿದ್ದ ವಿಚಾರ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು.ಆಗ ಸರ್ಕಾರ ತಾನು ಕೊಟ್ಟಿದ್ದ ಪ್ರಮಾಣ ಪತ್ರವನ್ನು ಪುನಃಅ ಹಿಂದೆಗೆದುಕೊಂಡಿತು ಆಗ ಮೊಗೇರರು ಇದರ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದರು. ಇಂದು ಸುಪ್ರೀಂ ಕೋರ್ಟ್ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡದ ಮೊಗೇರರು ಪರಿಶಿಷ್ಠ ಪಂಗಡದ ಪ್ರಮಾಣ ಪತ್ರ ಹೊಂದಲಿದ್ದು ಅವರಿಗೆ ಸಿಗಬಹುದಾದ ಎಲ್ಲಾ ಸೌಲಭ್ಯಗಳಿಗೆ ಅರ್ಹರಾಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT