ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಸುಕಿನ ವೇಳೆ ಅಪಘಾತದಲ್ಲಿ ವ್ಯಕ್ತಿ ಸಾವು, ಶವದ ಮೇಲೇ ಹರಿದು ಹೋದ ನೂರಾರು ವಾಹನಗಳು!

ಅಪರಿಚಿತ ವ್ಯಕ್ತಿಯ ಶವದ ಮೇಲೆ 150 ಹೆಚ್ಚು ವಾಹನಗಳು ಸಂಚರಿಸಿದ ಭೀಕರ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ.

ಬೆಂಗಳೂರು: ಅಪರಿಚಿತ ವ್ಯಕ್ತಿಯ ಶವದ ಮೇಲೆ 150 ಹೆಚ್ಚು ವಾಹನಗಳು ಸಂಚರಿಸಿದ ಭೀಕರ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ.
ಮಡಿವಾಳ ಬಳಿ ಇರುವ ಬಿಎಟಿಪಿಎಲ್ ಎಲಿವೇಟೆಡ್ ಫ್ಲೈಓವರ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರಿಗೆ ಇಂದು ನಸುಕಿನ ಜಾವ 3 ಗಂಟೆಗೆ ವಾಹನವೊಂದು ಡಿಕ್ಕಿ ಹೊಡೆದಿತ್ತು.. ಆ ಸಂದರ್ಭದಲ್ಲಿ ವ್ಯಕ್ತಿಯು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಆದರೆ ಈ ಅಪಘಾತವಾಗಿರುವ ವಿಚಾರ ಯಾರಿಗೂ ತಿಳಿಯದ ಕಾರಣದಿಂದ ಆ ಮಾರ್ಗದಲ್ಲಿ ಬರುವ ವಾಹನಗಳೆಲ್ಲವೂ ಶವದ ಮೇಲೆಯೇ ಹರಿದು ಹೋಗಿದೆ. ಕೆಲ ಗಂಟೆಗಳ ನಂತರ ಸಂಚಾರಿ ಪೋಲೀಸರು ಈ ವಿಷಯವನ್ನು ಗಮನಿಸಿದ್ದಾರೆ. ಆದರೆ ಅಷ್ಟರಲ್ಲೇ ವ್ಯಕ್ತಿಯ ದೇಹದ ಮೇಲೆ 150 ಕ್ಕೂ ಹೆಚ್ಚು ವಾಹನಗಳು ಹರಿದ ಪರಿಣಾಮ ಗುರುತು ಸಹ ಸಿಗದಂತಾಗಿತ್ತು.
ಆಂಬುಲೆನ್ಸ್‍ಗೆ ಕರೆ ಮಾಡಿದ ಪೋಲೀಸರು ಶವವನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಮಡಿವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!