ಬೆಂಗಳೂರು: ಜನಪ್ರಿಯ ಇಂದಿರಾ ಕ್ಯಾಂಟೀನ್ ಯೋಜನೆ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಮತ್ತೊಂದು ಯೋಜನೆ ಜಾರಿಗೆ ಮುಂದಾಗಿದ್ದು, ಈ ಬಾರಿ ಇಂದಿರಾ ಸಾರಿಗೆ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.
ಮಾಧ್ಯಮವೊಂದು ವರದಿ ಮಾಡಿರುವಂತೆ ಇಂದಿರಾ ಸಾರಿಗೆ ಹೆಸರಿನಲ್ಲಿ ನೂತನ ಸಾರಿಗೆ ಯೋಜನೆಯನ್ನು ಜಾರಿಗೆ ತರಲು ರಾಜ್ಯ ಸಾರಿಗೆ ಇಲಾಖೆ ನಿರ್ಧರಿಸಿದ್ದು. ಈ ಯೋಜನೆ ಅನ್ವಯ ಈ ಇಂದಿರಾ ಸಾರಿಗೆ ಯೋಜನೆಯ ಬಸ್ ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಶೇ.50 ಟಿಕೆಟ್ ದರ ರಿಯಾಯಿತಿ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಧ್ಯಮಗಳಿದೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸಾರಿಗೆ ಸಚಿವ ಎಚ್ ಎಂ ರೇವಣ್ಣ ಅವರು, ಪ್ರಸ್ತುತ ಸರ್ಕಾರದ ಈ ಯೋಜನೆ ಇನ್ನೂ ಚರ್ಚಾ ಹಂಚದಲ್ಲಿದೆ. ಮಹಿಳೆಯರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.
ಅಂತೆಯೇ ಪ್ರಸ್ತುತ ಯೋಜನೆ ಕುರಿತು ಅಧಿಕಾರಗಳೊಂದಿಗೆ ಸಾಧಕ-ಭಾದಕಗಳನ್ನು ಚರ್ಚಿಸಲಾಗುತ್ತಿದ್ದು. ಯೋಜನೆಯ ವ್ಯಾಪ್ತಿ ಮತ್ತು ಇತರೆ ಅಂಶಗಳನ್ನು ಚರ್ಚಿಸಲಾಗುತ್ತಿದೆ. ಇಲಾಖೆ ಇದೇ ನವೆಂಬರ್ 17ರಂದು ಯೋಜನೆ ಕುರಿತು ನಿರ್ಧಾರ ಪ್ರಕಟಿಸಲು ಮುಂದಾಗಿದ್ದೆವು. ಆದರೆ ಈ ಬಗೆಗಿನ ಕಾರ್ಯಗಳು ಇನ್ನೂ ಪೂರ್ಣಗೊಂಡಿಲ್ಲದ ಕಾರಣ ಬಹುಶಃ ಇನ್ನು 15 ರಿಂದ 20 ದಿನಗಳೊಳಗೆ ಈ ಬಗ್ಗೆ ಅಧಿಕೃತ ಘೋಷಣೆ ಹೊರ ಬೀಳುವ ಸಾಧ್ಯತೆ ಇದೆ. ಯೋಜನೆಯಿಂದಾಗಿ ರಾಜ್ಯದ ಮಹಿಳೆಯರು ಪ್ರಮುಖವಾಗಿ ನಗರಭಾಗದಲ್ಲಿರುವ ಗಾರ್ಮೆಂಟ್ಸ್ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಆಟಲ್ ಸಾರಿಗೆ ಯೋಜನೆಯನ್ನು ಪರಿಚಯಿಸಿತ್ತು. ಗ್ರಾಮೀಣ ಭಾಗದ ಜನರನ್ನು ದೃಷ್ಟಿಯಲ್ಲಿಟ್ಟುಕೊಂಡು ಅಂದಿನ ಸಾರಿಗೆ ಸಚಿವರಾಗಿದ್ದ ಆರ್ ಅಶೋಕ್ ಅವರು ಈ ಯೋಜನೆಯನ್ನು ಜಾರಿಗೆ ತಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics