ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಹೆಲ್ಮೆಟ್ ಹಾಕದೇ ಬೈಕ್ ನಲ್ಲಿ ಜಾಲಿ ರೈಡ್ ಮಾಡಿದ್ದು ಇದಕ್ಕೆ ಪ್ರತಿಯಾಗಿ ಪೊಲೀಸರಿಗೆ ದಂಡ ಕಟ್ಟಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ ಹೆಲ್ಮೆಟ್ ಬಳಸದೇ ಪ್ರಮೋದ್ ಮಧ್ವರಾಜ್ ಅವರು ಬೈಕ್ ನಲ್ಲಿ ಜಾಲಿ ರೈಡ್ ಮಾಡಿದ್ದರು. ಇದನ್ನು ಸ್ಥಳೀಯರೊಬ್ಬರು ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು. ಇನ್ನು ಸಚಿವರ ನಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲ ಪೊಲೀಸರು ಮಧ್ವರಾಜ್ ಅವರು ವಿರುದ್ಧ ದೂರು ದಾಖಲಿಸಿದ್ದರು.
1988ರ ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಆರೋಪದಡಿ ಸೆಕ್ಷನ್ 177ರ ಅಡಿಯಲ್ಲಿ ಸಚಿವರ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಸುಯೋ-ಮೊಟೋ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಹೆಲ್ಮೆಟ್ ಧರಿಸದೇ ಸಂಚಾರಿ ನಿಯಮ ಉಲ್ಲಂಘಿಸಿದ ಸಚಿವರು ಸ್ವತಃ ಪೊಲೀಸ್ ಠಾಣೆಗೆ ಬಂದು 100 ರುಪಾಯಿ ದಂಡ ತೆತ್ತಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics