ರಾಮಲಿಂಗಾ ರೆಡ್ಡಿ 
ರಾಜ್ಯ

ದೆಹಲಿಯಲ್ಲಿ ಸಮ-ಬೆಸ ಯಶಸ್ವಿಯಾದರೆ ಬೆಂಗಳೂರಿನಲ್ಲೂ ಜಾರಿ: ರಾಮಲಿಂಗಾ ರೆಡ್ಡಿ

ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ ಈಗ ಮೂರನೇ....

ಬೆಂಗಳೂರು: ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ ಈಗ ಮೂರನೇ ಬಾರಿಗೆ ಸಮ-ಬೆಸ ಸಂಖ್ಯೆಯ ನಿಯಮ ಜಾರಿಗೆ ತರುತ್ತಿದ್ದು, ಈ ಬಾರಿ ಅಲ್ಲಿ ಯಶಸ್ವಿಯಾದರೆ ಅದನ್ನು ಬೆಂಗಳೂರಿನಲ್ಲೂ ಜಾರಿಗೊಳಿಸುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಶನಿವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಸಮ-ಬೆಸ ನಿಯಮ ದೆಹಲಿಯ ಮಾಲಿನ್ಯ ನಿಯಂತ್ರಿಸುತ್ತದೆ ಎಂಬುದು ಸಾಬೀತಾದರೆ, ಅದನ್ನು ಬೆಂಗಳೂರಿನಲ್ಲೂ ಜಾರಿಗೊಳಿಸುವಂತೆ ಸಾರಿಗೆ ಇಲಾಖೆಗೆ ಸೂಚಿಸಲಾಗುವುದು ಮತ್ತು ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಂತಹ ನಗರಗಳಲ್ಲಿ ಕೇವಲ ಸಮ-ಬೆಸ ನಿಯಮದಿಂದ ಮಾತ್ರ ಮಾಲಿನ್ಯವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಿಲ್ಲ. ವಾಹನಗಳ ಪ್ರಮಾಣ ಕಡಿಮೆಯಾಗಬೇಕು. 2013ರಲ್ಲಿ ನಗರದಲ್ಲಿ 54 ಲಕ್ಷ ವಾಹನಗಳಿದ್ದವು. ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 12 ಲಕ್ಷ ವಾಹನಗಳು ಹೆಚ್ಚಾಗಿವೆ ಎಂದು ಈ ಹಿಂದೆ ಸಾರಿಗೆ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.
ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ಅಪಾಯದ ಮಟ್ಟಕ್ಕೆ ಏರಿದ್ದು, ಅದನ್ನು ತಡೆಯುವುದಕ್ಕಾಗಿ ದೆಹಲಿ ಸರ್ಕಾರ ನವೆಂಬರ್ 13ರಿಂದ 5 ದಿನಗಗಳ ಕಾಲ ಸಮ-ಬೆಸ ನಿಯಮ ಜಾರಿಗೆ ತರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ