ಗೃಹ ಸಚಿವ ರಾಮಲಿಂಗಾ ರೆಡ್ಡಿ 
ರಾಜ್ಯ

ಗೌರಿ ಹಂತಕರ ಸುಳಿವು, ಆದರೆ ಈಗ ಮಾಹಿತಿ ನೀಡುವುದಿಲ್ಲ: ಗೃಹ ಸಚಿವ ರಾಮಲಿಂಗಾ ರೆಡ್ಡಿ

ಪತ್ರಕರ್ತೆ ಗೌರಿ ಲಂಕೇಶ್ ಅವರ ಹಂತಕರ ಸುಳಿವು ನಮಗೆ ಸಿಕ್ಕಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹಂತಕರ ಸುಳಿವು ನಮಗೆ ಸಿಕ್ಕಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. 
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನ.11 ರಂದು ನಡೆದ ಪತ್ರಿಕಾ ಸಂವಾದದಲ್ಲಿ ಮಾತನಾಡಿರುವ ರಾಮಲಿಂಗಾ ರೆಡ್ಡಿ ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ಬಗ್ಗೆ ಎಸ್ಐಟಿಯಿಂದ ಸಂಪೂರ್ಣ ಮಾಹಿತಿ ಲಭ್ಯವಾಗಿದೆ. ಆದರೆ ಈಗ ಮಾಹಿತಿ ನೀಡಲಾಗುವುದಿಲ್ಲ, ಆರೋಪಿಗಳನ್ನು ಶೀಘ್ರಬೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. 
ಇದೇ ವೇಳೆ ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣವನ್ನೂ ಉಲ್ಲೇಖಿಸಿರುವ ರಾಮಲಿಂಗಾ ರೆಡ್ಡಿ ದಾಭೋಲ್ಕರ್ ಹತ್ಯೆ ಪ್ರಕರಣದ ಆರೋಪಿಗಳು ಇನ್ನೂ ಸಿಕ್ಕಿಲ್ಲ, ಮಹಾರಾಷ್ಟ್ರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಬಗ್ಗೆ ಸ್ಪಷ್ಟ ಸುಳಿವು ದೊರೆತಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!