ಬಂಧನಕ್ಕೀಡಾದ ಸರಗಳ್ಳರು 
ರಾಜ್ಯ

ಭಾವರಿಯಾ ಗ್ಯಾಂಗ್ ಬಳಿಕ, ಶಿವಾಜಿನಗರದಲ್ಲಿ ಮತ್ತೆ ಮೂವರು ಕುಖ್ಯಾತ ಸರಗಳ್ಳರ ಬಂಧನ!

ನಗರದಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಸರಗಳ್ಳತನ ಮಾಡುತ್ತಿದ್ದ ನಟೋರಿಯಸ್ ಸರಗಳ್ಳರನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಗರದಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಸರಗಳ್ಳತನ ಮಾಡುತ್ತಿದ್ದ ನಟೋರಿಯಸ್ ಸರಗಳ್ಳರನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಬಂಧನಕ್ಕೀಡಾದ ಭಾವರಿಯಾ ಗ್ಯಾಂಗ್ ನ ಸರಗಳ್ಳರಂತೆಯೇ ಕಪ್ಪುಬಣ್ಣದ ಪಲ್ಸರ್ ಬೈಕ್ ನಲ್ಲಿ ಸರಗಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ, ಬಂಧಿತರನ್ನು ಇಬ್ರಾಹಿಂ  ಫಯಾಜ್  ಎಂಬಾತರನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಬಂಧಿತರಿಂದ ಸುಮಾರು 300 ತೂಕದ ಚಿನ್ನದ ಸರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಂತೆಯೇ ಕಳ್ಳತನಕ್ಕೆ ಬಳಸುತ್ತಿದ್ದ ಪಲ್ಸರ್ ಬೈಕ್  ಅನ್ನು ಕೂಡ ವಶಕ್ಕೆ ಪಡೆದಿದ್ದಾರೆ.
ಇನ್ನು ಪ್ರಸ್ತುತ ಬಂಧನಕ್ಕೀಡಾಗಿರುವ ಸರಗಳ್ಳರ ವಿರುದ್ಧ ಒಟ್ಟು 8 ಸರಗಳ್ಳತನ  ಪ್ರಕರಣಗಳು ದಾಖಲಾಗಿದ್ದು, ಇವರ ಕಳ್ಳತನ ಕಾರ್ಯ ಸಿಸಿಟಿವಿ ಸೆರೆಯಾಗಿದ್ದವು. ಇವುಗಳ ಆದಾರ ಮೇಲೆ ಮುಖಚರ್ಯೆ ಕಂಡು ಹಿಡಿದ ಪೊಲೀಸರು  ಇಂದು ಕಾರ್ಯಾಚರಣೆ ನಡೆಸಿ ಕಳ್ಳರನ್ನು ಬಂಧಿಸಿದ್ದಾರೆ.
ಈಗ್ಗೆ ಕೆಲವೇ ದಿನಗಳ ಹಿಂದಷ್ಟೇ ಕುಖ್ಯಾತ ಭಾವರಿಯಾ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಮೂವರು ಪಟ್ಟಿಗೆ ಸೇರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!