ಬೆಂಗಳೂರು: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಅಪರಿಚಿತ ವ್ಯಕ್ತಿಯ ಭೀಕರ ಕೊಲೆ 
ರಾಜ್ಯ

ಬೆಂಗಳೂರು: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಅಪರಿಚಿತ ವ್ಯಕ್ತಿಯ ಭೀಕರ ಕೊಲೆ

ಪರಿಚಿತ ವ್ಯಕ್ತಿಯ ಕೈ ಕಡಿದು, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇಂದು ನಡೆದಿದೆ.

ಬೆಂಗಳೂರು: ಅಪರಿಚಿತ ವ್ಯಕ್ತಿಯ ಕೈ ಕಡಿದು, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇಂದು ನಡೆದಿದೆ. ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಮಹಾಲಕ್ಷ್ಮೀ ಲೇಔಟ್ ನ ಕಾರ್ಡ್ ರಸ್ತೆ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು.ವ್ಯಕ್ತಿಯ ದೇಹ ರಕ್ತದ ಮಡುವಿನಲ್ಲಿ ಬಿದ್ದಿತ್ತು.
ಮಣಪ್ಪುರಂ ಗೋಲ್ಡ್ ಲೋನ್ ಸೆಂಟರ್ ನ ಬಳಿ ಮೊದಲು ಆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಅಲ್ಲಿಂದ ಸುಮಾರು ನೂರು ಮೀಟರ್ ವರೆಗೆ ಓಡಿಸಿಕೊಂಡು ಹೋಗಿದ್ದಾರೆ. ಬಳಿಕ ಅವನ ಮೇಲೆ ಕಲ್ಲೆಸೆದು ಹತ್ಯೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಯಾವ ಸಿಸಿ ಟಿವಿ ಕ್ಯಮಾರಾಗಳಿಲ್ಲದ ಕಾರಣ ಕೊಲೆಗಾರರು ಯಾರು, ಕೊಲೆಯಾದ ವ್ಯಕ್ತಿ ಯಾರೆಂದು ಕಂಡುಹಿಡಿಯುವುದು  ಷ್ಟವಾಗಿದೆ ಎಂದು ಪೋಲೀಸರು ತಿಳಿಸಿದರು.
ಮಹಾಲಕ್ಷ್ಮಿ ಲೇಔಟ್ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರಲ್ಲದೆ ತುಂಡಾದ ಕೈ ಮತ್ತು ಮೃತದೇಹವನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಸಾಗಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್