ರಾಜ್ಯ

3 ವಾರಗಳಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ದುರಸ್ತಿ ಕಾರ್ಯ ಪೂರ್ಣ: ಸಚಿವ ಮಹದೇವಪ್ಪ

Lingaraj Badiger
ಬೆಳಗಾವಿ: ಸರ್ಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾರ್ಯವನ್ನು ಮುಂದಿನ ಮೂರು ವಾರಗಳಲ್ಲಿ ಪೂರ್ಣಗೊಳಿಸಲಿದೆ ಎಂದು ಲೋಕೋಪಯೋಗಿ ಸಚಿವ ಎಚ್ ಸಿ ಮಹದೇವಪ್ಪ ಅವರು ಮಂಗಳವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.
ಇಂದು ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆ ಟಿ ಶ್ರೀಕಾಂತೇಗೌಡ ಅವರ ಪ್ರಶ್ನಿಗೆ ಉತ್ತರಿಸಿದ ಮಹದೇವಪ್ಪ ಅವರು, ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಹೆದ್ದಾರಿ ಹಾಳಾಗಿದೆ. ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಈಗಗಾಲೇ ಸೂಚನೆ ನೀಡಲಾಗಿದ್ದು, ಮುಂದಿನ ಮೂರು ವಾರಗಳಲ್ಲಿ ದುರಸ್ತಿ ಕಾರ್ಯ ಪೂರ್ಣಗೊಲಿಸಲಾಗುವುದು ಎಂದರು.
ಇದೇ ವೇಳೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶೀಘ್ರದಲ್ಲೇ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಷಟ್ಪಥ ರಸ್ತೆಯನ್ನಾಗಿ ಪರಿವರ್ತಿಸುವ ಕಾರ್ಯ ಆರಂಭಿಸಲಿದೆ. ಜನವರಿಯಲ್ಲಿ ಯೋಜನೆಗೆ ಜಾಲನೆ ನೀಡುವುದಾಗಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಅವರು ಭರವಸೆ ನೀಡಿದ್ದರೆ ಎಂದು ಮಹದೇವಪ್ಪ ಅವರು ತಿಳಿಸಿದರು.
ಇನ್ನು ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾರ್ಯವನ್ನು ಮುಂದಿನ ವರ್ಷ ಜನವರಿಯಲ್ಲಿ ಆರಂಭಿಸಿ ಏಪ್ರಿಲ್ ವೇಳೆಗೆ ಪೂರ್ಣಗೊಳಿಸುವುವುದಾಗಿ ಲೋಕೋಪಯೋಗಿ ಸಚಿವರು ಹೇಳಿದ್ದಾರೆ. 
SCROLL FOR NEXT