ಐಎಎಫ್ ನ ಫ್ಲೈಯಿಂಗ್ ಡ್ಯಾಗರ್ಸ್ ಸ್ಕ್ವಾಡ್ರನ್ ಬೆಂಗಳೂರಿನಿಂದ ಕೊಯಂಬತ್ತೂರಿಗೆ ವರ್ಗಾವಣೆ?
"ಫ್ಲೈಯಿಂಗ್ ಡ್ಯಾಗರ್ಸ್ 45" ಯುದ್ಧ ವಿಮಾನ ತುಕಡಿಯನ್ನು ಬೆಂಗಳೂರಿನಿಂದ ತಮಿಳುನಾಡಿನ ಕೊಯಂಬತ್ತೂರಿಗೆ ವರ್ಗಾವಣೆ ಮಾಡುವ ಸಾಧ್ಯತೆಗಳಿವೆ.
ಬೆಂಗಳೂರು: "ಫ್ಲೈಯಿಂಗ್ ಡ್ಯಾಗರ್ಸ್ 45" ಯುದ್ಧ ವಿಮಾನ ತುಕಡಿಯನ್ನು ಬೆಂಗಳೂರಿನಿಂದ ತಮಿಳುನಾಡಿನ ಕೊಯಂಬತ್ತೂರಿಗೆ ವರ್ಗಾವಣೆ ಮಾಡುವ ಸಾಧ್ಯತೆಗಳಿವೆ.
ಈ ತುಕಡಿಯಿಂದ ಪ್ರಸ್ತುತ ಬೆಂಗಳೂರಿನಲ್ಲಿ ಯುದ್ಧ ವಿಮಾನ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದ್ದು, ಮುಂದಿನ ವರ್ಷದ ವೇಳೆಗೆ ಕೊಯಂಬತ್ತೂರಿನ ಬಳಿ ಇರುವ ಸುಲೂರ್ ಗೆ ಶಾಶ್ವತವಾಗಿ ಯುದ್ಧ ವಿಮಾನ ತುಕಡಿಯನ್ನು ವರ್ಗಾವಣೆ ಮಾಡಲು ಚಿಂತನೆ ನಡೆಸಲಾಗಿದೆ.
ಗಣರಾಜ್ಯೋತ್ಸವ ದಿನಾಚರಣೆಯಂದು ಫ್ಲೈಯಿಂಗ್ ಡ್ಯಾಗರ್ಸ್ 45 ತುಕಡಿ ನಡೆಸಿದ್ದ ಫೈಪಾಸ್ಟ್ ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು, ಅಷ್ಟೇ ಅಲ್ಲದೇ ತೇಜಸ್ ಯುದ್ಧ ವಿಮಾನದ ವೆಪನ್ ಕೇಪಬಲಿಟಿಯನ್ನು ಪರೀಕ್ಷಿಸುವ ಪ್ರಕ್ರಿಯೆಯಲ್ಲಿಯೂ ಭಾಗಿಯಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.