ರಾಜ್ಯ

ಖಾಸಗಿ ವೈದ್ಯರ ಮುಷ್ಕರ: ಚಿಕಿತ್ಸೆ ಸಿಗದೆ ಮೂರು ತಿಂಗಳ ಮಗು ಸಾವು

Lingaraj Badiger
ಹಾಸನ: ರಾಜ್ಯ ಸರ್ಕಾರದ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಕಳೆದ ಎರಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದು, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮೂರು ತಿಂಗಳ ಮಗುವೊಂದು ಮೃತಪಟ್ಟಿರುವ ಘಟನೆ ಮಂಗಳವಾರ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ತಿಪಟೂರಿನ ದಂಪತಿ ನದಿಮ್ ಪಾಶಾ ಮತ್ತು ಫರಾ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತಮ್ಮ ಮೂರು ತಿಂಗಳ ಮಗುವನ್ನು ಎತ್ತಿಕೊಂಡು ನಿನ್ನೆ ಹಲವು ಆಸ್ಪತ್ರೆಗಳನ್ನು ಸುತ್ತಿದ್ದಾರೆ. ಆದರೂ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆಯದಿದ್ದಾಗ ಅಂತಿಮವಾಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಹೋಗಿದ್ದಾರೆ. ಅಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಆಸ್ಪತ್ರೆಗೆ ತೆಗೆದುಕೊಂಡು ಹೋಗುವಂತೆ ಸೂಚಿಸಲಾಗಿದೆ. 
ಇಂದು ಹಾಸನಕ್ಕೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿ ಮಧ್ಯೆಯೇ ಮಗು ಸಾವನ್ನಪ್ಪಿದೆ ಎಂದು ಅವರು ಹೇಳಿದ್ದಾರೆ.
ಮಗು ಸ್ಥಿತಿ ಗಂಭೀರವಾಗಿದ್ದರಿಂದ ತಿಪಟೂರಿನಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ತಮ್ಮ ಮಗು ಮೃತಪಟ್ಟಿದೆ ಎಂದು ಪೋಷಕರು ತಿಳಿಸಿದ್ದಾರೆ.
SCROLL FOR NEXT