ಸಂಗ್ರಹ ಚಿತ್ರ 
ರಾಜ್ಯ

ಬಿಸಿಯೂಟ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಸಾಧ್ಯವಿಲ್ಲ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

ಸರ್ಕಾರಿ ಶಾಲೆಯ ಮಕ್ಕಳು ಬಿಸಿಯೂಟ ಪಡೆಯಲು ಆಧಾರ್ ಕಾರ್ಡ್'ನ್ನು ಕಡ್ಡಾಯ ಮಾಡಲು ಸಾಧ್ಯವಿಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಫ್ರೌಢ ಶಿಕ್ಷಣ ಇಲಾಖೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಪತ್ರ ಬರೆದಿದೆ...

ಬೆಂಗಳೂರು: ಸರ್ಕಾರಿ ಶಾಲೆಯ ಮಕ್ಕಳು ಬಿಸಿಯೂಟ ಪಡೆಯಲು ಆಧಾರ್ ಕಾರ್ಡ್'ನ್ನು ಕಡ್ಡಾಯ ಮಾಡಲು ಸಾಧ್ಯವಿಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಫ್ರೌಢ ಶಿಕ್ಷಣ ಇಲಾಖೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಪತ್ರ ಬರೆದಿದೆ. 
ಮಧ್ಯಾಹ್ನ ಬಿಸಿಯೂಟ ಪಡೆಯಲು ಸರ್ಕಾರಿ ಶಾಲಾ ಮಕ್ಕಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುವಂತೆ ಈ ಹಿಂದೆ ಕರ್ನಾಟಕ ಸೇರಿದಂತೆ ಹಲವು ರಾಜ್ಯ ಸರ್ಕಾರಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸೂಚನೆ ನೀಡಿತ್ತು. 
ಆಧಾರ್ ಕಾರ್ಡ್ ನೋಂದಣಿಯನ್ನು ಶೇ.100 ರಷ್ಟು ನೋಂದಣಿ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರಗಳಿಗೆ ಶಾಲಾ ಮಕ್ಕಳಿಗೆ ಆಧಾರ್ ಕಡ್ಡಾಯಗೊಳಿಸುವಂತೆ ಸೂಚಿಸಿತ್ತು. ಈ ವರೆಗೂ ರಾಜ್ಯಲ್ಲಿ ಶೇ.75ರಷ್ಟು ಶಾಲಾ ಮಕ್ಕಳು ಆಧಾರ್ ಕಾರ್ಡ್ ನ್ನು ಪಡೆದುಕೊಂಡಿದ್ದಾರೆ. ಶೇ.100 ರಷ್ಟು ಹೊಂದುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರ ಬಿಸಿಯೂಟಕ್ಕೂ ಆಧಾರ್ ಕಡ್ಡಾಯ ಮಾಡುವಂತ ಸೂಚಿಸಿತ್ತು. 
ಕೇಂದ್ರ ಸರ್ಕಾರ ಈ ಸೂಚನೆಯನ್ನು ತಿರಸ್ಕರಿಸುವ ರಾಜ್ಯ ಸರ್ಕಾರ ಪತ್ರವೊಂದನ್ನು ಪಡೆದಿದ್ದು, ಮಧ್ಯಾಹ್ನದ ಬಿಸಿಯೂಟಕ್ಕೆ ಶಾಲಾ ಮಕ್ಕಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದೆ ಎಂದು ವರದಿಗಳು ತಿಳಿಸಿವೆ. 
ಈ ಕುರಿತಂತೆ ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು, ಆಧಾರ್ ಕಾರ್ಡ್ ಮಾಡಿಸಿದ ಬಳಿಕ ಬಿಸಿಯೂಟವನ್ನು ಸೇವಿಸುವಂತೆ ಮಕ್ಕಳಿಗೆ ನಾವು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ನಾವು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಸ್ಪಷ್ಟವಾಗಿ ತಿಳಿಸಿದ್ದೇವೆಂದು ಹೇಳಿದ್ದಾರೆ. 
ಬಿಸಿಯೂಟ ಯೋಜನೆಯ ನಿಜವಾದ ಉಧ್ದೇಶವೇ ಮಕ್ಕಳನ್ನು ಆಕರ್ಷಿಸುವುದು. ಶಿಕ್ಷಣವನ್ನು ಮುಂದುವರೆಸಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ನಾವು ಈ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಹಾಗಿರುವಾಗ ಆಧಾರ್ ಕಾರ್ಡ್ ಕಾರಣವನ್ನು ನೀಡಿ ಮಕ್ಕಳಿಗೆ ಹೇಗೆ ಊಟ ನೀಡುವುದಿಲ್ಲ ಎಂದು ಹೇಳಲು ಸಾಧ್ಯ? ಕೇಂದ್ರದ ಮಟ್ಟದಲ್ಲಿ ನಮ್ಮ ಉದ್ದೇಶ ಹಾಗೂ ಸ್ಪಷ್ಟನೆಯನ್ನು ನೀಡಿದ್ದೇವೆ. ಬರ ಬಂದಿದ್ದ ತಾಲೂಕಿನಲ್ಲಿ ಬೇಸಿಗೆಯಲ್ಲಿಯೂ ಬಿಸಿಯೂಟವನ್ನು ನೀಡುವ ರಾಜ್ಯವೆಂದರು ಅದು ಕರ್ನಾಟಕ ಮಾತ್ರ. ಹೀಗಾಗಿ ಬಿಸಿಯೂಟಕ್ಕೆ ಆಧಾರ್ ಕಾರ್ಡ್ ನ್ನು ಕಡ್ಡಾಯ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT