ರಾಜ್ಯ

ಕೆಪಿಎಂಇ ತಿದ್ದುಪಡಿ ಕಾಯ್ದೆಯಲ್ಲಿ ದೊಡ್ಡ ಬದಲಾವಣೆಗಳಿಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ

Manjula VN
ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕದಲ್ಲಿ ದೊಡ್ಡ ಬದಲಾವಣೆಗಳಾವುದನ್ನೂ ಮಾಡಿಲ್ಲ, ವಿಧೇಯಕವು ಸೋಮವಾರ ವಿಧಾನಮಂಡಲದಲ್ಲಿ ಮಂಡನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. 
ಕೆಪಿಎಂಇ ತಿದ್ದುಪಡಿ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಭಾರತೀಯ ವೈದ್ಯಕೀಯ ಸಂಘ ರಾಜ್ಯದೆಲ್ಲೆಡೆ ತೀವ್ರವಾಗಿ ಪ್ರತಿಭಟನೆ ನಡೆಸಿತ್ತು. ವೈದ್ಯರ ಪ್ರತಿಭಟನೆ ಹಿನ್ನಲೆಯಲ್ಲಿ ವೈದ್ಯ ಸಂಘದ ಅಧ್ಯಕ್ಷರೊಂದಿಗೆ ಭೇಟಿ ಮಾಡಿ ಮಾತುಕತೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧೇಯಕವನ್ನು ಪರಿಶೀಲನೆ ನಡೆಸಿ ಕಠಿಣ ನಿರ್ಧಾರಗಳನ್ನು ತೆಗೆದು ಹಾಕುವುದಾಗಿ ಭರವಸೆಗಳನ್ನು ನೀಡಿದ್ದರು. ವಿಧೇಯಕದಲ್ಲಿ ವೈದ್ಯರಿಗೆ ಜೈಲು ಶಿಕ್ಷೆಯನ್ನು ತೆಗೆದು ಹಾಕಿ ದಂಡವನ್ನು ಮಾತ್ರ ವಿಧಿಸುವ ಬದಲಾವಣೆಗಳನ್ನು ಮಾಡುವುದಾಗಿ ತಿಳಿಸಿದ್ದಾರೆ. 
ಇದೀಗ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು ಕೆಪಿಎಂಇ ಕಾಯ್ದೆಯಲ್ಲಿ ದೊಡ್ಡ ಬದಲಾವಣೆಗಳಾವುದನ್ನೂ ಮಾಡಿಲ್ಲ. ಸೋಮವಾರ ನಡೆಯಲಿರುವ ವಿಧಾನಮಂಡಲ ಅಧಿವೇಶನಜದಲ್ಲಿ ವಿಧೇಯಕವನ್ನು ಮಂಡನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 
ಇದೇ ವೇಳೆ ವೈದ್ಯರ ಪ್ರತಿಭಟನೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸಾವನ್ನಪ್ಪಿದವರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಬರವಣಿಗೆ ಮೂಲಕ ದೂರುಗಳು ಬಂದಿದ್ದೇ ಆದರೆ, ಮೃತರ ಕುಟಂಬಸ್ಥರಿಗೆ ಪರಿಹಾರ ಧನವನ್ನು ನೀಡಲಾಗುತ್ತದೆ ಎಂದಿದ್ದಾರೆ. 
SCROLL FOR NEXT