ಇಂದಿರಾ ಕ್ಯಾಂಟೀನ್ ನಲ್ಲಿ ಬಿಬಿಸಿ ವರದಿಗಾರ್ತಿ ಗೀತಾ ಪಾಂಡೆ 
ರಾಜ್ಯ

ರಾಜ್ಯ ಸರ್ಕಾರದ ಇಂದಿರಾ ಕ್ಯಾಂಟೀನ್‌ ಗೆ ಬಿಬಿಸಿ ಮನ್ನಣೆ

ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್ ಗೆ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರೆತಿದ್ದು, ಖ್ಯಾತ ಅಂತಾರಾಷ್ಟ್ರೀಯ ಸುದ್ದಿವಾಹಿನಿ ಬಿಬಿಸಿ ಈ ಬಗ್ಗೆ ವಿಶೇಷ ವರದಿ ಪ್ರಕಟಿಸಿದ್ದು, ಹಸಿದವರಿಗಾಗಿ ಉತ್ತಮ ಯೋಜನೆ ಎಂದು ಮೆಚ್ಚುಗೆ ಸೂಚಿಸಿದೆ.

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್ ಗೆ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರೆತಿದ್ದು, ಖ್ಯಾತ ಅಂತಾರಾಷ್ಟ್ರೀಯ ಸುದ್ದಿವಾಹಿನಿ ಬಿಬಿಸಿ ಈ ಬಗ್ಗೆ ವಿಶೇಷ ವರದಿ  ಪ್ರಕಟಿಸಿದ್ದು, ಹಸಿದವರಿಗಾಗಿ ಉತ್ತಮ ಯೋಜನೆ ಎಂದು ಮೆಚ್ಚುಗೆ ಸೂಚಿಸಿದೆ.
ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದು, ಹಸಿವು ಮುಕ್ತ ಕರ್ನಾಟಕಕ್ಕಾಗಿ ನಾನು ಯೋಜನೆ ಜಾರಿಗೆ ತಂದಿದ್ದೇನೆ.. ಈ ಯೋಜನೆಯೊಂದಿಗೆ ನಾನು  ಭಾವನಾತ್ಮಕವಾಗಿ ಬೆಸೆದುಕೊಂಡಿದ್ದು, ಈ ಬಗ್ಗೆ ಬಿಬಿಸಿಯಲ್ಲಿ ಬಂದ ವರದಿ ಖುಷಿ ನೀಡಿದೆ ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಹೇಳಿದ್ದಾರೆ.
ಇನ್ನು ಬಿಬಿಸಿ ವರದಿಯಲ್ಲಿರುವಂತೆ "ತಾಜಾ ಆಗಿರುವ, ಬಿಸಿ, ಬಿಸಿ ಆಹಾರವನ್ನು ಜನರು ಅತ್ಯಂತ ಕಡಿಮೆ ದರದಲ್ಲಿ ಕೊಳ್ಳುತ್ತಿದ್ದು, ಸರ್ಕಾರದ ಈ ಯೋಜನೆ ಹೆಚ್ಚು ಜನಪ್ರಿಯವಾಗಿದೆ. ದಿನಗೂಲಿ ಕಾರ್ಮಿಕರು, ಚಾಲಕರು, ಭದ್ರತಾ  ಸಿಬ್ಬಂದಿ, ಭಿಕ್ಷುಕರು ಸೇರಿ ಬಡವರು ಆಹಾರ ಕೊಳ್ಳುತ್ತಿದ್ದು, ಇಂಥವರ ಹಸಿವು ನೀಗಿಸುವಲ್ಲಿ, ಸರ್ಕಾರ ತೆಗೆದುಕೊಂಡಿರುವ ಕ್ರಮ ಶ್ಲಾಘನೀಯ ಎಂದು ಬಿಬಿಸಿ ವರದಿ ಮಾಡಿದೆ ಎಂದು ಹೇಳಲಾಗಿದೆ. ಕೇವಲ ಐದು ರೂ.ಗೆ ತಿಂಡಿ ಸಿಗಲಿದ್ದು, ಈ ಮುಂಚೆ 30 ರೂ. ಖಾಲಿ ಮಾಡುತ್ತಿದ್ದವರು ದಿನಕ್ಕೆ 25 ರೂ. ಉಳಿಸುವಂತಾಗಿದೆ. ಮೂರು ಹೊತ್ತಿನ ಊಟಕ್ಕೆ ಸುಮಾರು 140 ರೂ. ಖಾಲಿ ಮಾಡುತ್ತಿದ್ದವರು ಇದೀಗ ಕೇವಲ 40 ರೂ. ಖಾಲಿ ಮಾಡುತ್ತಿದ್ದು, ದಿನಕ್ಕೆ 100  ರೂ.ನಷ್ಟು ಉಳಿತಾಯ ಮಾಡುತ್ತಿದ್ದಾರೆ. ಇದರಿಂದ ಬಡವರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ ಎಂದು ಬಿಬಿಸಿ ವರದಿಯಲ್ಲಿ ಅಭಿಪ್ರಾಯ ಪಟ್ಟಿದೆ.
ಸ್ವತಃ ಹಣ ನೀಡಿ ಆಹಾರದ ಗುಣಮಟ್ಟ ಪರೀಕ್ಷಿಸಿದ ಬಿಬಿಸಿ ಪ್ರತಿನಿಧಿ
ಇನ್ನು ಭಾರತದಲ್ಲಿರುವ ಬಿಬಿಸಿ ಸುದ್ದಿವಾಹಿನಿ ಪ್ರತಿನಿಧಿ ಗೀತಾ ಪಾಂಡೆ ಅವರು ಸಿಟಿ ಮಾರುಕಟ್ಟೆಯಲ್ಲಿರುವ ಕ್ಯಾಂಟೀನ್‌ನಲ್ಲಿ ಟೋಕನ್‌ ಪಡೆದು ಉಪಾಹಾರ ಹಾಗೂ ಊಟದ ರುಚಿಯನ್ನು ಸವಿದಿದ್ದಾರೆ. ತಮಿಳುನಾಡಿನ ಅಮ್ಮ  ಕ್ಯಾಂಟೀನ್‌ ಮಾದರಿಯಲ್ಲೇ ಕರ್ನಾಟಕದಲ್ಲಿ ಇಂದಿರಾ ಕ್ಯಾಂಟೀನ್‌ ಅನ್ನು ಆಗಸ್ಟ್‌ 16ರಂದು ಆರಂಭಿಸಲಾಯಿತು. ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಉದ್ಘಾಟಿಸಿದ್ದರು. ತಾಜಾ, ಬಿಸಿ ಹಾಗೂ ಸುವಾಸನೆಭರಿತ ತಿಂಡಿ,  ಊಟವನ್ನು ಅತ್ಯಂತ ಕಡಿಮೆ ಬೆಲೆಗೆ ನೀಡಲಾಗುತ್ತಿದೆ. ತಿಂಡಿಗೆ ರೂ.5, ಊಟಕ್ಕೆ ರೂ.10 ನಿಗದಿಪಡಿಸಲಾಗಿದೆ. ಬಡವರು, ದಿನಗೂಲಿ ನೌಕರರು, ಚಾಲಕರು, ಭದ್ರತಾ ಸಿಬ್ಬಂದಿ, ಭಿಕ್ಷುಕರು –ಹೀಗೆ ಅನೇಕ ಮಂದಿ ಕ್ಯಾಂಟೀನ್‌ಗಳ  ಮುಂದೆ ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಅನೇಕರ ಹಸಿವು ನೀಗಿಸುವಲ್ಲಿ ಈ ಯೋಜನೆ ಯಶಸ್ವಿಯಾಗಿದೆ ಎಂದು ಗೀತಾ ವರದಿ ಮಾಡಿದ್ದಾರೆ.
‘ಕಳೆದ ವರ್ಷ ಅಮ್ಮ ಕ್ಯಾಂಟೀನ್‌ನಲ್ಲಿ ಊಟ ಮಾಡಿದ್ದೆ. ಊಟ ಚೆನ್ನಾಗಿತ್ತು. ಇಂದಿರಾ ಕ್ಯಾಂಟೀನ್‌ನ ಊಟ ಅದಕ್ಕಿಂತಲೂ ಚೆನ್ನಾಗಿದೆ’ ಎಂದು ಗೀತಾ ಇಂದಿರಾ ಕ್ಯಾಂಟೀನ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ವರ್ತಕರ ಮನವಿಗೆ ಸ್ಪಂದಿಸಿದ ಕೇಂದ್ರ; ದೀಪಾವಳಿ ನಂತರವೇ UPI ಮರ್ಚೆಂಟ್ ಶುಲ್ಕ ಜಾರಿ

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

ಬೆಂಗಳೂರಿನಲ್ಲಿ SIR ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: ಮರು ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ಆದೇಶ!