ಬೆಳಗಾವಿ: ಪೂರ್ವ ನಿರ್ಧಾರ ಮತ್ತು ಪೂರ್ವ ಭ್ರೂಣ ಪತ್ತೆ ಕಾಯ್ದೆಗೆ 2002ರಲ್ಲಿ ತಿದ್ದುಪಡಿ ತರಲಾಗಿದ್ದರೂ ಕೂಡ (ಪಿಸಿ ಅಂಡ್ ಪಿಎನ್ ಡಿಟಿ ಆಕ್ಟ್ )ಕರ್ನಾಟಕದಲ್ಲಿ ಲಿಂಗ ಅನುಪಾತದಲ್ಲಿ ಯಾವುದೇ ಪ್ರಗತಿಯಾಗಿಲ್ಲ.
2014ರಲ್ಲಿ 1000 ಗಂಡು ಮಕ್ಕಳಿಗೆ 917 ಹೆಣ್ಣು ಮಕ್ಕಳಿದ್ದರೆ, 2017ರಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಪ್ರತಿ ಸಾವಿರ ಗಂಡು ಮಕ್ಕಳಿಗೆ 898 ಆಗಿದೆ. ನಿನ್ನೆ ಬೆಳಗಾವಿ ಅಧಿವೇಶನದ ಶೂನ್ಯ ವೇಳೆಯಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಶೂನ್ಯ ವೇಳೆಯಲ್ಲಿ ತಿಳಿಸಿದರು.
ಕಳೆದ 15 ವರ್ಷಗಳಲ್ಲಿ ಪಿಸಿ ಕಾಯ್ದೆಯನ್ನು ಉಲ್ಲಂಘಿಸಿದ 79 ಪ್ರಕರಣಗಳು ವರದಿಯಾಗಿವೆಯಷ್ಟೆ. ಮೂರು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆಯಷ್ಟೆ. ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ನಿಷೇಧ ಕಾಯ್ದೆ ಉಲ್ಲಂಘಿಸಿದವರಿಗೆ ಸರ್ಕಾರ ಕಠಿಣ ಶಿಕ್ಷೆ ನೀಡಬೇಕು, ಆಗ ಲಿಂಗಾನುಪಾತದ ವ್ಯತ್ಯಾಸವನ್ನು ಕಡಿಮೆ ಮಾಡಬಹುದು ಎಂದು ಗಣೇಶ್ ಕಾರ್ಣಿಕ್ ಹೇಳಿದರು.
ಇದಕ್ಕೆ ಉತ್ತರಿಸಿದ ಆರೋಗ್ಯ ಖಾತೆ ಸಚಿವ ರಮೇಶ್ ಕುಮಾರ್, ಲಿಂಗ ನಿರ್ಧಾರ ಮಾಡುವ ಕೇಂದ್ರಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics