ರಾಜ್ಯ

ವೈದ್ಯರ ಮುಷ್ಕರ ಕುರಿತು ಪಿಐಎಲ್; ವಿಚಾರಣೆ ಮುಂದೂಡಿದ ನ್ಯಾಯಾಲಯ

Manjula VN
ಬೆಂಗಳೂರು: ಕೆಪಿಎಂಇ ತಿದ್ದುಪಡಿ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಖಾಸಗಿ ವೈದ್ಯರು ನಡೆಸಿದ್ದ ಪ್ರತಿಭಟನೆಯಿಂದಾಗಿ ರಾಜ್ಯದಲ್ಲಿ ಸಂಭವಿಸಿದ ರೋಗಿಗಳ ಸಾವು ಕುರಿತಂತೆ ಸಲ್ಲಿಸಲಾಗಿದ್ದ ಪಿಐಎಲ್ ಕುರಿತ ವಿಚಾರಣೆಯನ್ನು ಹೈಕೋರ್ಟ್ ಜ.2ಕ್ಕೆ ಮುಂದೂಡಿದೆ. 
ವೈದ್ಯರ ಮುಷ್ಕರದಿಂದಾಗಿ ರಾಜ್ಯದಲ್ಲಿ ಸಕಾಲಕ್ಕೆ ಚಿಕಿತ್ಸೆ ದೊರಕದೆ ಹಲವು ರೋಗಿಗಳು ಸಾವನ್ನಪ್ಪಿದ್ದು ಕುರಿತಂತೆ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಕೆಲವರು ನ್ಯಾಯಾಲಯದಲ್ಲಿ ಈ ಹಿಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. 
ವೈದ್ಯರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ವಕೀಲರಾದ ಎನ್.ಪಿ.ಅಮೃತೇಶ್, ಜಿ.ಆರ್. ಮೋಹನ್ ಹಾಗೂ ಆದಿನಾರಾಯಣ ಎಂಬುವವರು ಸಲ್ಲಿಸಿದ್ದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೆಚ್.ಜಿ.ರಮೇಶ್ ಹಾಗೂ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಪರಿಶೀಲನೆ ನಡೆಸಿದ್ದು, ವಿಚಾರಣೆಯನ್ನು ಜ.2ಕ್ಕೆ ಮೂಂದೂಡಿದೆ. 
SCROLL FOR NEXT