ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೆಎಸ್ಆರ್'ಟಿಸಿ ಬಸ್ ಅಪಘಾತ: 30 ಪ್ರಯಾಣಿಕರಿಗೆ ಗಾಯ

ವೇಗವಾಗಿ ಬರುತ್ತಿದ್ದ ಕೆಎಸ್ಆರ್'ಟಿಸಿ ಬಸ್ ವೊಂದು ಟ್ರಕ್'ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ 30 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ...

ಸಾಂದರ್ಭಿಕ ಚಿತ್ರ
Manjula VN
Updated On : 21 Nov 2017, 12:06 pm
ಹಾಸನ: ವೇಗವಾಗಿ ಬರುತ್ತಿದ್ದ ಕೆಎಸ್ಆರ್'ಟಿಸಿ ಬಸ್ ವೊಂದು ಟ್ರಕ್'ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ 30 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ. 
ಅಪಘಾತಕ್ಕೀಡಾದ ಬಸ್ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಅರಸೀಕರೆಯ ಮೈಲಹಳ್ಳಿ ಗೇಟ್ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 206 ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. 
ಅಪಘಾತ ಸಂಭವಿಸುತ್ತಿದ್ದಂತೆಯೇ ರಕ್ಷಣೆಗೆ ಧಾವಿಸಿರುವ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement