ಸಂಗ್ರಹ ಚಿತ್ರ 
ರಾಜ್ಯ

ಕಲಬುರಗಿ: ಟ್ರಾಕ್ಟರ್ ಗೆ ಕಾರು ಡಿಕ್ಕಿಯಾಗಿ ವಕೀಲರಿಬ್ಬರ ಸಾವು

ವೇಗವಾಗಿ ಬಂದ ಕಾರೊಂದು ಟ್ರ್ಯಾಕ್ಟರ್ ಗೆ ಗುದ್ದಿದ ಪರಿಣಾಮ ಇಬ್ಬರು ವಕೀಲರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ: ವೇಗವಾಗಿ ಬಂದ ಕಾರೊಂದು ಟ್ರ್ಯಾಕ್ಟರ್ ಗೆ ಗುದ್ದಿದ ಪರಿಣಾಮ ಇಬ್ಬರು ವಕೀಲರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿಯ ಅಫ್ಜಲ್ ಪುರ ತಾಲ್ಲೂಕಿನ ಮಲ್ಲಾಬಾದ್ ಕ್ರಾಸ್ ಬಳಿ ಈ ಅಪಘಾತವಾಗಿದ್ದು, ಮೃತರನ್ನು ಶ್ರೀರಂಗ ಖೇಡ್ಕರ್ ಹಾಗೂ ರಮೇಶ್ ದೊಡ್ಡಮನಿ ಎಂದು ಗುರುತಿಸಲಾಗಿದೆ. ಅಪಘಾತದ ಬಗ್ಗೆ ಅಫ್ಜಲ್ ಪುರ ವೃತ್ತ ನಿರೀಕ್ಷಕ ಜೆ  ಹೆಚ್ ಇನಾಮ್ದಾರ್ ಅವರು ಮಾಹಿತಿ ನೀಡಿದ್ದು, ವಕೀಲರು ತಮ್ಮ ಕಕ್ಷೀದಾರರನ್ನು ಕರೆತರುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ ಡಿಕ್ಕಿಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ವಕೀಲರು ಸ್ಥಳದಲ್ಲೇ  ಸಾವನ್ನಪ್ಪಿದ್ದು, ಕಕ್ಷೀದಾರರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಂತೆಯೇ ಅಪಘಾತಕ್ಕೆ ಅತಿಯಾದ ವೇಗವೇ ಕಾರಣ ಎಂದು ತಿಳಿದುಬಂದಿದ್ದು, ಅಪಘಾತದ ಸಂದರ್ಭದಲ್ಲಿ ಕಾರು ಸುಮಾರು 140 ಕಿ.ಮೀ ವೇಗದಿಂದ ಬರುತ್ತಿತ್ತು. ಪ್ರಸ್ತುತ ಅಫ್ಜಲ್ ಪುರ ಠಾಣೆಯಲ್ಲಿ ಪ್ರಕರಣ  ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.
ನಿನ್ನೆಯಷ್ಟೇ ಇದೇ ಕಲಬುರಗಿಯಲ್ಲಿ ಕ್ರೂಸರ್ ವಾಹನ ಇಂಧನ ಟ್ಯಾಂಕರ್ ಗೆ ಗುದ್ದಿದ ಪರಿಣಾಮ ಕ್ರೂಸರ್ ನಲ್ಲಿದ್ದ 5 ಮಂದಿ ಸಾವನ್ನಪ್ಪಿದ್ದರು. ಕ್ರೂಸರ್ ನಲ್ಲಿದ್ದವೆರಲ್ಲರೂ ಮದುವೆಗೆ ತೆರಳುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!