ಚಿತ್ರದುರ್ಗ: ಕಾರುಗಳ ಮಧ್ಯೆ ಭೀಕರ ಅಪಘಾತ, 6 ಮಂದಿ ದುರ್ಮರಣ
ಕ್ವಾಲಿಸ್ ಮತ್ತು ಎರ್ಟಿಗೋ ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ...
ಚಿತ್ರದುರ್ಗ: ಕ್ವಾಲಿಸ್ ಮತ್ತು ಎರ್ಟಿಗೋ ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೇಟಿಕುರ್ಕೆ ಬಳಿ ಸಂಭವಿಸಿದೆ.
ಮೇಟಿಕುರ್ಕೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚಿತ್ರದುರ್ಗದ ಕಡೆಗೆ ತೆರಳುತ್ತಿದ್ದ ಕ್ವಾಲಿಸ್ ಕಾರಿನ ಟಯರ್ ಸ್ಫೋಟಗೊಂಡು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಎರ್ಟಿಗೋ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮೂವರು ಸ್ಥಿತಿ ಗಂಭೀರವಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.