ಮದ್ರಾಸ 
ರಾಜ್ಯ

50 ಕೋಟಿ ವೆಚ್ಚದಲ್ಲಿ ರಾಜ್ಯದ ಕೆಲ ಮದ್ರಾಸಗಳಿಗೆ ಕಂಪ್ಯೂಟರ್ ಭಾಗ್ಯ!

ಆಧುನೀಕರಣ ಯೋಜನೆ ಅಡಿಯಲ್ಲಿ 50 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿನ ಮದ್ರಾಸಗಳಿಗೆ ಕಂಪ್ಯೂಟರ್ ಭಾಗ್ಯ ಕಲ್ಪಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ...

ಬೆಂಗಳೂರು: ಆಧುನೀಕರಣ ಯೋಜನೆ ಅಡಿಯಲ್ಲಿ 50 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿನ ಮದ್ರಾಸಗಳಿಗೆ ಕಂಪ್ಯೂಟರ್ ಭಾಗ್ಯ ಕಲ್ಪಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮುಂದಾಗಿದೆ. 
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಔಪಚಾರಿಕ ಮತ್ತು ಆಧುನಿಕ ಶಿಕ್ಷಣವನ್ನು ಪರಿಚಯಿಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮದ್ರಾಸಗಳಿಗೆ ಕಂಪ್ಯೂಟರ್ ಗಳನ್ನು ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಇಲಾಖೆ 7 ಮದ್ರಾಸಗಳನ್ನು ಆಯ್ಕೆ ಮಾಡಿದ್ದು ಪ್ರತಿ ಮದ್ರಾಸಗಳಿಗೆ 6 ರಿಂದ 10 ಲಕ್ಷದವರೆಗೆ ಹಣ ಬಿಡುಗಡೆ ಮಾಡಲಾಗುತ್ತದೆ. 
ಮುಸ್ಲಿಂ ಸಮುದಾಯಕ್ಕೆ ಸೇರಿದ ಮಕ್ಕಳು ಹೆಚ್ಚಾಗಿ  ಮದ್ರಸಾಗಳಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದು ಅವರು ಔಪಚಾರಿಕ ಮತ್ತು ಆಧುನಿಕ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮದ್ರಾಸಗಳಲ್ಲಿ ಅಗತ್ಯವಿರುವ ಆಧುನಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಈ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಈ ಯೋಜನೆಯು ಗುರಿ ಹೊಂದಿದೆ ಎಂದು ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 
ಒಟ್ಟಾರೆ 150 ಮದ್ರಾಸಗಳಿಂದ ಅರ್ಜಿಗಳು ಬಂದಿದ್ದು ಇದರಲ್ಲಿ 70 ಮದ್ರಾಸಗಳನ್ನು ಪಟ್ಟಿ ಮಾಡಲಾಗಿದೆ. ಅಲ್ಲದೆ ಮದ್ರಾಸಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸಮಿತಿಯೊಂದನ್ನು ರಜಿಸಲಾಗಿದೆ. ಕನಿಷ್ಠ 25 ವಿದ್ಯಾರ್ಥಿಗಳನ್ನು ಹೊಂದಿರುವ ಮದ್ರಾಸಗಳಿಗೆ ಈ ಯೋಜನೆ ಅನ್ವಯಿಸಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT