ರಮೇಶ್ ಕುಮಾರ್ 
ರಾಜ್ಯ

ಜಿಲ್ಲಾ ಆಸ್ಪತ್ರೆಗಳನ್ನು ಭಾಗಶಃ ಖಾಸಗೀಕರಣಗೊಳಿಸುವ ಕೇಂದ್ರದ ಪ್ರಸ್ತಾವನೆಗೆ ರಾಜ್ಯದ ತಿರಸ್ಕಾರ

ಜಿಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಭಾಗಶಃ ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಶುಕ್ರವಾರ....

ಬೆಂಗಳೂರು: ಜಿಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಭಾಗಶಃ ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಶುಕ್ರವಾರ ತಿರಸ್ಕರಿಸಿದೆ.
ಎರಡು ಮತ್ತು ಮೂರನೆ ಹಂತದ ಜಿಲ್ಲಾ ಕೇಂದ್ರಗಳ ಆಸ್ಪತ್ರೆಗಳಲ್ಲಿ ಹೃದ್ರೋಗ, ಕ್ಯಾನ್ಸರ್ ಹಾಗೂ ಶ್ವಾಸಕೋಶ ಸಂಬಂಧಿತ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ಜವಾಬ್ದಾರಿಯನ್ನು ಖಾಸಗಿಗೆ ವಹಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಗೂ ನೀತಿ ಆಯೋಗ ಜಂಟಿಯಾಗಿ ರೂಪುರೇಷೆ ಸಿದ್ಧಪಡಿಸಿ, ಈ ಬಗ್ಗೆ ಅಭಿಪ್ರಾಯ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿತ್ತು.
ಕೇಂದ್ರ ಸರ್ಕಾರದ ಪತ್ರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು, ಉತ್ತಮ ಸೇವೆ ಒದಗಿಸುತ್ತಿರುವ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿಯವರಿಗೆ ಒಪ್ಪಿಸುವಂತಹ ನೀತಿ ಆಯೋಗದ ನಿರ್ಧಾರ ಸರಿಯಲ್ಲ. ಆರೋಗ್ಯ ಮೂಲಭೂತ ಹಕ್ಕು. ಖಾಸಗಿ ಆಸ್ಪತ್ರೆಗಳಿಗೆ ಸರಿಸಮಾನವಾಗಿ ಬಡವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಚಿಕಿತ್ಸೆ ಕೊಡುವುದು ಸರ್ಕಾರದ ಉದ್ದೇಶವಾಗಬೇಕು. ಆದರೆ, ಕೇಂದ್ರ ಸರ್ಕಾರ ಸಿದ್ಧಪಡಿಸಿರುವ ಪ್ರಸ್ತಾವನೆ ಖಾಸಗಿಯವರಿಗೆ ಲಾಭ ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ರೋಗಿಗಳಿಗೆ ಒದಗಿಸುವ ಚಿಕಿತ್ಸೆಗೆ ದರ ನಿಗದಿ ಮಾಡುವ ಅವಕಾಶ ಈ ಪ್ರಸ್ತಾವದಲ್ಲಿ ಇದೆ. ಆದರೆ, ಖಾಸಗಿಯವರು ಕ್ರಮೇಣ ಚಿಕಿತ್ಸಾ ದರಗಳನ್ನು ಹೆಚ್ಚಿಸುತ್ತಾರೆ. ಆಗ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ವ್ಯತ್ಯಾಸ ಇಲ್ಲದಂತಾಗುತ್ತದೆ. ಇದನ್ನು ಅನುಷ್ಠಾನ ಮಾಡಿದರೆ ವಾಣಿಜ್ಯೀಕರಣದ ಮಾದರಿಯನ್ನು ಕೇಂದ್ರ ಸರ್ಕಾರ ಮತ್ತು ನೀತಿ ಆಯೋಗ ಒಪ್ಪಿಕೊಂಡಂತಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಕ್ಯಾನ್ಸರ್‌, ಹೃದ್ರೋಗ, ಶ್ವಾಸಕೋಶ ಸಂಬಂಧಿ ಕಾಯಿಲೆಗೆ ಸೂಪರ್ ಸ್ಪೆಷಾಲಿಟಿ ಚಿಕಿತ್ಸೆ ನೀಡುವ ಸಂಬಂಧ ರಾಜ್ಯದಲ್ಲಿ ಸ್ವಾಯತ್ತವಾಗಿ ನಡೆಯುತ್ತಿರುವ ಕಿದ್ವಾಯಿ, ಜಯದೇವ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಕೆಲವು ಸರ್ಕಾರಿ ವೈದ್ಯಕೀಯ ಆಸ್ಪತ್ರೆಗಳಲ್ಲಿ ರೋಗಗಳಿಗೆ ಖಾಸಗಿ ಆಸ್ಪತ್ರೆಗಳಿಗಿಂತಲೂ ಉತ್ತಮ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿದೆಎಂದು ರಮೇಶ್ ಕುಮಾರ್ ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್