ದಿಗಂತ್, ಪ್ರಣವ್ ದೇವರಾಜ್ 
ರಾಜ್ಯ

ನಟ ದಿಗಂತ್, ಪ್ರಣಾಮ್ ಸೇರಿ 8 ಮಂದಿಗೆ ನೋಟಿಸ್

ಟಿಟಿಡಿ ಮಾಜಿ ಅಧ್ಯಕ್ಷ, ಮಾಜಿ ಸಂಸದ, ದಿವಂಗತ ಆದಿಕೇಶವುಲು ನಾಯ್ಡು ಮೊಮ್ಮಗ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ...

ಬೆಂಗಳೂರು: ಟಿಟಿಡಿ ಮಾಜಿ ಅಧ್ಯಕ್ಷ, ಮಾಜಿ ಸಂಸದ, ದಿವಂಗತ ಆದಿಕೇಶವುಲು ನಾಯ್ಡು ಮೊಮ್ಮಗ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನಟ ಪ್ರಜ್ವಲ್, ದಿಗಂತ್ ಸೇರಿದಂತೆ 8 ಮಂದಿಗೆ ಜಯನಗರ ಪೊಲೀಸರು ನೋಟಿಸ್ ನೀಡಿದ್ದಾರೆ. 
ಕಳೆದ ವಾರ ನಗರದ ಸೌತ್ ಎಂಡ್ ಸರ್ಕಲ್ ನಲ್ಲಿ ಕಾರು ಅಪಘಾತವಾಗಿತ್ತು. ಈ ವೇಳೆ ಸಿಕ್ಕಿಬಿದ್ದಿ ಆರೋಪಿ ವಿಷ್ಟು ಜತೆ ನಟರಾದ ದಿಗಂತ್ ಮತ್ತು ಪ್ರಜ್ವಲ್ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ದಿಗಂತ್, ಪ್ರಜ್ವಲ್, ಪ್ರಣಾಮ್ ದೇವರಾಜ್ ಮತ್ತು ಫಜಲ್ ಎಂಬುವರಿಗೆ ಜಯನಗರ ಪೊಲೀಸರು ನೋಟಿಸ್ ನೀಡಿದ್ದು ಮೂರು ದಿನದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. 
ನೋಟಿಸ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ದೇವರಾಜ್ ಅವರು ನನ್ನ ಹಿರಿಯ ಮಗ ಪ್ರಜ್ವಲ್ ಅವರಿಗೆ ನೋಟಿಸ್ ಬಂದಿಲ್ಲ. ಕಿರಿಯ ಮಗ ಪ್ರಣಾಮ್ ದೇವರಾಜ್ ಅವರಿಗೆ ನೋಟಿಸ್ ಬಂದಿದೆ. ಈ ಬಗ್ಗೆ ಪ್ರಣಾಮ್ ದೇವರಾಜ್ ಠಾಣೆಗೆ ಹೋಗಿ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದ್ದಾರೆ. 
ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ನಟ ದಿಗಂತ್ ಸದ್ಯ ನನಗೆ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ಬಂದರೇ ನಾನು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT