ಸಂಗ್ರಹ ಚಿತ್ರ 
ರಾಜ್ಯ

ರಾಜ್ಯ ಸರ್ಕಾರ ಐಟಿ ಆಧಿಕಾರಿಗಳ ಮೇಲೆ ಎಸಿಬಿ ದಾಳಿಗೆ ಸಂಚು ರೂಪಿಸಿಲ್ಲ: ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ರಾಜ್ಯ ಸರ್ಕಾರ ಕೇಂದ್ರದ ಆದಾಯ ತೆರಿಗೆ ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಮೂಲಕ ದಾಳಿ ನಡೆಸುವ ಯಾವುದೇ ಯೋಜನೆ ರೂಪಿಸಿಲ್ಲ ಎಂದು ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರ ಕೇಂದ್ರದ ಆದಾಯ ತೆರಿಗೆ ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಮೂಲಕ ದಾಳಿ ನಡೆಸುವ ಯಾವುದೇ ಯೋಜನೆ ರೂಪಿಸಿಲ್ಲ ಎಂದು ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕಾಂಗ್ರೆಸ್ ಮುಖಂಡರ ಮೇಲೆ ಐಟಿ ದಾಳಿ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಎಸಿಬಿ ಮೂಲಕ ಐಟಿ ಅಧಿಕಾರಿಗಳ ಮೇಲೆ ದಾಳಿಗೆ ಯೋಜನೆ ರೂಪಿಸಿದೆ ಎಂಬ ಆರೋಪ ಕೇಳಿ ಬರುತ್ತಿದ್ದಂತೆಯೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ  ರಾಮಲಿಂಗಾ ರೆಡ್ಡಿ ಅವರು, ರಾಜ್ಯ ಸರ್ಕಾರ ಐಟಿ ಆಧಿಕಾರಿಗಳ ಮೇಲೆ ಎಸಿಬಿ ದಾಳಿಗೆ ಸಂಚು ರೂಪಿಸಿಲ್ಲ ಎಂದು ಹೇಳಿದ್ದಾರೆ.

"ಇಷ್ಟಕ್ಕೂ ಇಂತಹುದೊಂದು ವಿಚಾರ ಐಟಿ ಇಲಾಖೆಯ ಹೆಚ್ಚುವರಿ ಮಹಾನಿರ್ದೇಶಕ ಬಿಆರ್ ಬಾಲಕೃಷ್ಣನ್ ಅವರಿಗೆ ಏಕ ಬಂದಿತು ಎಂಬುದು ನನಗೆ ತಿಳಿಯುತ್ತಿಲ್ಲ. ಆದರೆ ನಾವು ಕೇಂದ್ರದ ಅಧಿಕಾರಿಗಳನ್ನು ಟಾರ್ಗೆಟ್  ಮಾಡಿಕೊಂಡಿಲ್ಲ. ಇನ್ನೂ ಕೇಂದ್ರ ಸರ್ಕಾರವೇ ಬಿಜೆಪಿಯೇತರ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ಮೂಲಕ ದ್ವೇಷದ ರಾಜಕಾರಣ ನಡೆಸುತ್ತಿದೆ. ದೇಶದ ಬಹುತೇಕ ಕಡೆಗಳಲ್ಲಿ ನಡೆದ ಐಟಿ ದಾಳಿಗಳು ರಾಜಕೀಯ  ದ್ವೇಷ ಪೂರಿತದ್ದೇ ಎಂದು ರಾಮಲಿಂಗಾ ರೆಡ್ಡಿ ಆರೋಪಿಸಿದರು.

ಇದೇ ವೇಳೆ ಐಟಿ ಇಲಾಖೆ ಎಸಿಬಿ ವ್ಯಾಪ್ತಿಗೆ ಬರುತ್ತದೆಯೇ ಎಂಬ ವಿಚಾರದ ಬಗ್ಗೆ ಚರ್ಚೆಯಾಗಿರಬಹುದು ಅಥವಾ ಅಗದೆಯೂ ಇರಬಹುದು. ಈ ಬಗ್ಗೆ ಐಟಿ ಮಹಾ ನಿರ್ದೇಶಕರಿಗೆ ಕನಸೇನಾದರೂ ಬಿದ್ದಿತ್ತೇ..ಈ ವಿಚಾರ ಅವರಿಗೆ  ಹೇಗೆ ತಿಳಿಯಿತು. ಇದರಿಂದಲೇ ತಿಳಿಯುತ್ತದೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ದೂರವಾಣಿಗಳನ್ನು ಕದ್ದಾಲಿಸುತ್ತಿದೆ ಎಂದು. ಆದರೆ ರಾಜ್ಯ ಸರ್ಕಾರ ಐಟಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸುವ ಕುರಿತು ಚರ್ಚಿಸಿಲ್ಲ ಎಂದು  ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!