ಗೌರಿ ಲಂಕೇಶ್ ಗೆ ಮರಣೋತ್ತರ ಅಂತಾರಾಷ್ಟ್ರೀಯ ಆನಾ ಪೊಲಿತ್ಕೊವಾಸಾಯ ಪ್ರಶಸ್ತಿ
ಹಿರಿಯ ಪತ್ರಕರ್ತೆ ದಿವಂಗತ ಗೌರಿ ಲಂಕೇಶ್ ಗೆ ಅನಾ ಪೊಲಿತ್ಕೋವಾಸಾಯ ಅಂತಾರಾಷ್ಟ್ರೀಯ ಪ್ರಶಸ್ತಿ ಘೋಷಿಸಲಾಗಿದೆ. ಈ ಪ್ರಶಸ್ತಿಯನ್ನು ....
ಬೆಂಗಳೂರು: ಹಿರಿಯ ಪತ್ರಕರ್ತೆ ದಿವಂಗತ ಗೌರಿ ಲಂಕೇಶ್ ಗೆ ಅನಾ ಪೊಲಿತ್ಕೋವಾಸಾಯ ಅಂತಾರಾಷ್ಟ್ರೀಯ ಪ್ರಶಸ್ತಿ ಘೋಷಿಸಲಾಗಿದೆ. ಈ ಪ್ರಶಸ್ತಿಯನ್ನು ಪಡೆಯುತ್ತಿರುವ ಮೋದಲ ಭಾರತೀಯರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಪ್ರಶಸ್ತಿಯನ್ನ ಪಾಕಿಸ್ತಾನದಲ್ಲಿ ಇಸ್ಲಾಮಿಕ್ ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುತ್ತಿರುವ ಗುಲಾಲಿ ಇಸ್ಮಾಯಿಲ್ ಜೊತೆ ಹಂಚಿಕೊಳ್ಳಲಾಗುವುದು.
ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗೌರಿ ಸಹೋದರಿ ಕವಿತಾ ಲಂಕೇಶ್, ಲಂಡನ್ ಮೂಲದ ರಾ ಇನ್ ವಾರ್ ವೇದಿಕೆ ಈ ಪ್ರಶಸ್ತಿಯನ್ನು ನೀಡುತ್ತಿದೆ ಎಂದು ಹೇಳಿದರು.
ಮಾನವ ಹಕ್ಕುಗಳು ಮತ್ತು ನ್ಯಾಯದ ಪರವಾಗಿ ಹೋರಾಟ ನಡೆಸುವ ದಿಟ್ಟ ಮಹಿಳೆಯರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ರಷ್ಯಾದಿಂದ ಇ ಮೇಲ್ ಮೂಲಕ ನಮಗೆ ಈ ಮಾಹಿತಿ ಲಭ್ಯವಾಗಿದೆ ಎಂದು ಕವಿತಾ ತಿಳಿಸಿದ್ದಾರೆ.
ಚೆಚೆನ್ಯಾ ಯುದ್ಧದಲ್ಲಿ ತೀವ್ರ ತೊಂದರೆಗೊಳಗಾದ ನಾಗರಿಕರ ವಿರುದ್ದ ಹೋರಾ ನಡೆಸುತ್ತಿದ್ದ ರಷ್ಯನ್ ಪತ್ರಕರ್ತೆ ಆನಾ ಪೊಲಿತ್ಕೋವಾಸ್ಕಾಯ ಅವರನ್ನು 2006ರ ಅಕ್ಚೋಬರ್ 7 ರಂದು ಹತ್ಯೆ ಮಾಡಲಾಗಿತ್ತು, ನಂತರ ಹೋರಾಟ ನಡೆಸುವ ಮಹಿಳೆಯರಿಗೆ ಗೌರವ ನೀಡಲೆಂದು ದಿಟ್ಟ ಮಹಿಳೆಯರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.