ಸಾಂದರ್ಭಿಕ ಚಿತ್ರ 
ರಾಜ್ಯ

ರಾಮನಗರದಲ್ಲಿ ಭೀಕರ ರಸ್ತೆ ಅಪಘಾತ: 4 ವಿದ್ಯಾರ್ಥಿಗಳ ದಾರುಣ ಸಾವು

ಬೆಂಗಳೂರು ನಗರದ ಹೊರ ಭಾಗದಲ್ಲಿ ಬೆಳಗಿನ ಜಾವ 4.30 ಗಂಟೆಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಕಂಟೈನರ್​ ಮತ್ತು ಕಾರು ನಡುವೆ ಭೀಕರ ...

ರಾಮನಗರ: ಬೆಂಗಳೂರು ನಗರದ ಹೊರ ಭಾಗದಲ್ಲಿ ಬೆಳಗಿನ ಜಾವ 4.30 ಗಂಟೆಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಕಂಟೈನರ್​ ಮತ್ತು ಕಾರು ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿದ್ದಾರೆ. 
ರಾಮನಗರ ತಾಲೂಕಿನ ಕೆಂಪನಹಳ್ಳಿ ಗೇಟ್‌ ಬಳಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಮೊದಲು ದಾಟಿ ಎದುರಿನಿಂದ ಬರುತ್ತಿದ್ದ ಕಂಟೈನರ್​ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 
ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ‌ ವೈದ್ಯಕೀಯ ವಿದ್ಯಾರ್ಥಿಗಳು. ಅವರ ಪೈಕಿ ಇಬ್ಬರು ಯವಕರು ಹಾಗೂ ಇಬ್ಬರು ಯುವತಿಯರು. ಇಬ್ಬರನ್ನು ಕೇರಳ ಮೂಲದ ನಿಕಿತ್ ಜಾಯ್ (21), ಜೋಯಿಲ್ ಜಾಕಬ್ (22) ಎಂದು ಗುರುತಿಸಲಾಗಿದೆ. ಈ ಸಂಬಂಧ ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT