ವಿಶ್ವಕರ್ಮ ಸಮುದಾಯ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜನಾಥ್ ಸಿಂಗ್ 
ರಾಜ್ಯ

ಸಾಮಾಜಿಕ ನ್ಯಾಯ ಭಿಕ್ಷೆ ಅಲ್ಲ, ಅದು ಅಧಿಕಾರಯುತ ಹಕ್ಕು: ರಾಜನಾಥ್ ಸಿಂಗ್

ಹಿಂದುಳಿದ ವರ್ಗಗಳಿಗೆ ಸಿಗಬೇಕಾದ ಎಲ್ಲಾ ರೀತಿಯ ಸೌಲಭ್ಯ ಹಾಗೂ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸಂವಿಧಾನಾತ್ಮಕ ಸ್ಥಾನಮಾನ ಒದಗಿಸಲು ...

ಬೆಂಗಳೂರು:  ಹಿಂದುಳಿದ ವರ್ಗಗಳಿಗೆ ಸಿಗಬೇಕಾದ ಎಲ್ಲಾ ರೀತಿಯ ಸೌಲಭ್ಯ ಹಾಗೂ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸಂವಿಧಾನಾತ್ಮಕ ಸ್ಥಾನಮಾನ ಒದಗಿಸಲು ನರೇಂದ್ರ ಮೋದಿ ಸರ್ಕಾರ ಬದ್ದವಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ವತಿಯಿಂದ ಏರ್ಪಡಿಸಿದ್ದ ರಾಜ್ಯಮಟ್ಟದ ವಿಶ್ವಕರ್ಮ ಜಯಂತಿ ಹಾಗೂ ವಿಶ್ವಕರ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಕ್ಕರೆ ಮಾತ್ರ ನವಭಾರತ ನಿರ್ಮಾಣದ ಕನಸು ಈಡೇರಲು ಸಾಧ್ಯ ಹಾಗೂ ದೇಶ ಸಾಮರಸ್ಯದಿಂದ ಇರಲು ಸಾಧ್ಯ ಎಂದರು. 
ಹಿಂದುಳಿದ ವರ್ಗಕ್ಕೆ ಸೇರಿದ ಎಲ್ಲ ಜಾತಿಯವರಿಗೂ ಅಧಿಕಾರ ಹಾಗೂ ಅವಕಾಶಗಳು ಸಮಾನವಾಗಿ ಸಿಗಬೇಕೆಂಬ ದೃಷ್ಟಿಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡಲು ನಿರ್ಧರಿಸಿದ್ದಾರೆ, ಈ ಕುರಿತ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ ಆಗಲು ವಿರೋಧ ಪಕ್ಷಗಳು ಬಿಡುತ್ತಿಲ್ಲ’
ರಾಜ್ಯದಲ್ಲಿ ಸುಮಾರು 45 ಲಕ್ಷ ಮಂದಿ ವಿಶ್ವಕರ್ಮ ಸಮುದಾಯದ ಜನವಿದ್ದಾರೆ, ನೀವು ಸಾಮಾಜಿಕ ನ್ಯಾಯಕ್ಕಾಗಿ ಭಿಕ್ಷೆ ಬೇಡುವ ಅಗತ್ಯವಿಲ್ಲ, ಅದು ನಿಮ್ಮ ಹಕ್ಕು ಎಂದು ಅಭಿಪ್ರಾಯ ಪಟ್ಟರು, ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳಿಗೆ ಕೇವಲ ಶೇ,30 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಹಿಂದುಳಿದ ವರ್ಗಗಳ ಮೀಸಲಾತಿ ಸೌಲಭ್ಯವನ್ನೂ ಕೆಲವೇ ಜಾತಿಗಳು ಅನುಭವಿಸುತ್ತಿವೆ. ತೀರಾ ಹಿಂದುಳಿದವರಿಗೆ ಈ ಸವಲತ್ತು ಸಿಗಬೇಕಾದರೆ ಒಳಮೀಸಲಾತಿ ಜಾರಿ ಆಗಬೇಕು. ಈ ಸಲುವಾಗಿ ಪ್ರಧಾನಿ ಸಮಿತಿಯೊಂದನ್ನು ರಚಿಸಿದ್ದಾರೆ’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಡಿಕೆ ಶಿವಕುಮಾರ್ ಪತ್ರ!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video